Featured
ತರಕಾರಿ, ದಿನಸಿ ವ್ಯಾಪಾರಿಗಳಿಗೆ ಕೊರೊನಾ ಟೆಸ್ಟ್- ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಸೂಚನೆ
![](https://risingkannada.com/wp-content/uploads/2020/08/Grocery.jpg)
ಕೊರೊನಾ ಸೋಂಕು ತೀವ್ರವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹೊಸ ನಿರ್ಧಾರ ತೆಗೆದುಕೊಂಡಿದೆ. ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
![Puranik Aston](https://risingkannada.com/wp-content/uploads/2020/07/aston.jpg)
ದಿನಬಳಕೆ ವಸ್ತುಗಳ ವ್ಯಾಪಾರಿಗಳು, ದಿನಸಿ ಮತ್ತು ತರಕಾರಿ ವ್ಯಾಪಾರಿಗಳ ಮುಖಾಂತರ ಸೋಂಕು ಪ್ರಸರಣದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದು, ಇದೇ ಕಾರಣಕ್ಕೆ ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.
ಕೊರೋನಾ ಸೋಂಕಿತರನ್ನು ಕರೆದೊಯ್ಯಲು ಅನುಕೂಲವಾಗುವಂತೆ ಸುಸಜ್ಜಿತ ಆಂಬುಲೆನ್ಸ್ ಸೌಲಭ್ಯ ನಿಗದಿಪಡಿಸಬೇಕು. ತುರ್ತು ಕರೆಗಳಿಗೆ ತಕ್ಷಣವೇ ಸ್ಪಂದಿಸುವಂತೆ ಸೂಚಿಸಿದ್ದಾರೆ. ಕೊರೋನಾ ಈಗ ಹೊಸ ಪ್ರದೇಶಗಳಿಗೆ ಹರಡುತ್ತಿದೆ. ಹೀಗಾಗಿ ಆರಂಭದಲ್ಲಿಯೇ ಸೋಂಕಿತರನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುವ ಮೂಲಕ ಕೊರೋನಾ ಸೋಂಕಿನ ಪ್ರಕರಣ ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.