ರಾಜಕೀಯ
ಹಾವೇರಿ ಅಖಾಡದಲ್ಲಿ ಬದಲಾದ ಲೆಕ್ಕಾಚಾರ.! ಕಣದಿಂದ ಬೊಮ್ಮಾಯಿ ಔಟ್.?
![](https://risingkannada.com/wp-content/uploads/2024/02/basavaraj-bommaie1-1.jpg)
ಹಾವೇರಿ : ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನ ಕಣಕ್ಕೆ ಇಳಿಸಿದೆ. ಆದರೆ ಬದಲಾದ ಲೆಕ್ಕಾಚಾರದಲ್ಲಿ ಬೊಮ್ಮಾಯಿ ಬದಲಿಗೆ ಮತ್ತೊಬ್ಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಣಕ್ಕಿಳಿಯುವ ಸಾಧ್ಯತೆ ಇದೆ.
ಇಂತಹ ಆಲೋಚನೆಯಲ್ಲಿರುವ ಬಿಜೆಪಿ ಹೈಕಮಾಂಡ್, ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದೆ. ಬಿಜೆಪಿ ಟಿಕೆಟ್ ಘೋಷಣೆ ಬಳಿಕ, ಕೇಸರಿ ಪಾಳಯದಲ್ಲಿ ನಿಗಿನಿಗಿ ಕೆಂಡದ ವಾತಾವರಣ ಸೃಷ್ಟಿ ಆಗಿದೆ. ಅದರಲ್ಲೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಹೆಸರು ಕೇಳಿಬರುತ್ತಿದ್ದು, ಅಲ್ಲಿನ ಸ್ಥಳೀಯ ನಾಯಕರಿಗೆ ಅಸಮಾಧಾನ ತರಿಸಿದೆ.
![](https://risingkannada.com/wp-content/uploads/2024/03/jagadish-shettar-1024x1024.jpg)
ಹೀಗಾಗಿ ಸ್ಟ್ಯಾಟರ್ಜಿ ಬದಲಾಯಿಸಲು ಮುಂದಾಗಿರೋ ಬಿಜೆಪಿ, ಶೆಟ್ಟರ್ ಗೆ ಬೆಳಗಾವಿ ಬದಲಾಗಿ, ಹಾವೇರಿ ಟಿಕೆಟ್ ನೀಡುವ ಚಿಂತನೆ ಕೇಸರಿ ಪಡಸಾಲೆಯಲ್ಲಿ ಆರಂಭವಾಗಿದೆ. ಇತ್ತ ಬಿಜೆಪಿಯದ್ದು ಒಂದು ಲೆಕ್ಕಾಚಾರ ಆದರೆ, ಕಾಂಗ್ರೆಸ್ ನದ್ದು ಮತ್ತೊಂದು ಲೆಕ್ಕ. ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಹಾಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರನ್ನ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆಗಳಿವೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಹೈಕಮಾಂಡ್ ಗೂ ಮಾಹಿತಿ ರವಾನಿಸಿದ್ದಾರೆ. ಹೆಚ್ ಕೆ ಪಾಟೀಲ್ ಸ್ಪರ್ಧೆಗೆ ಒಪ್ಪಿಗೆ ನೀಡಿದಾದ್ರೆ, ಹಾವೇರಿಯ ಅಖಾಡ ಮತ್ತಷ್ಟು ರಂಗೇರಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?