Connect with us

ಬೆಂಗಳೂರು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌

Bengalore : ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲವನ್ನು ಬೆಂಗಳೂರಿಗೆ ಉಪನಗರಗಳಾಗಿ ಬೆಳೆಸುವ ಗುರಿ ನನ್ನದು. ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಆದ್ದರಿಂದ ಈ ಬಾರಿಯೂ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸಬೇಕಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.

ಬಿಜೆಪಿ ಮುಖಂಡರು, ಕಾರ್ಯಕರ್ತರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ದೆಹಲಿಗೆ ಪರ್ಯಾಯವಾಗಿ ನೋಯ್ಡಾ ಇರುವಂತೆ ಬೆಂಗಳೂರಿಗೆ ಪರ್ಯಾಯವಾಗಿ ದೇವನಹಳ್ಳಿಯನ್ನು ಬೆಳೆಸುವ ಗುರಿ ನನ್ನದು. ಹಾಗೆಯೇ ಹೊಸಕೋಟೆ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲವನ್ನು ಉಪನಗರಗಳಾಗಿ ಅಭಿವೃದ್ಧಿಪಡಿಸಲಾಗುವುದು. ನನ್ನನ್ನು ಆಯ್ಕೆ ಮಾಡಿದರೆ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಸಹಾಯಕವಾಗುತ್ತದೆ. ಕಾಂಗ್ರೆಸ್‌ಗೆ ಮತ ಹಾಕಿದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧ್ಯವಾಗುವುದಿಲ್ಲ ಎಂದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಯಾವುದೇ ರಸ್ತೆ, ಸೇತುವೆ ನಿರ್ಮಿಸಿಲ್ಲ. ಎಲ್ಲಿಯೂ ಅಭಿವೃದ್ಧಿ ನಡೆಯುತ್ತಿಲ್ಲ. ಇದನ್ನು ಜನರಿಗೆ ತಿಳಿಸಬೇಕಿದೆ. ಜೆಡಿಎಸ್‌ ಜೊತೆ ಸಮನ್ವಯ ತಂಡಗಳನ್ನು ರಚಿಸಿ, ಪ್ರತಿ ಹಂತದಲ್ಲೂ ತಂಡಗಳನ್ನು ರಚಿಸಿ ಕೆಲಸ ಮಾಡಬೇಕು. ಬಿಜೆಪಿ-ಜೆಡಿಎಸ್‌ ಒಳಗೊಂಡ ಬೃಹತ್‌ ಪ್ರಚಾರ ಸಭೆಯನ್ನೂ ನಡೆಸಬೇಕಿದೆ ಎಂದರು.

ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಜನರು ಉತ್ಸುಕರಾಗಿದ್ದಾರೆ. ಐನೂರು ವರ್ಷಗಳಿಂದ ರಾಮ ಮಂದಿರ ಕೇವಲ ಕನಸಾಗಿತ್ತು. ಆದರೆ ಇದು ಬಿಜೆಪಿಗೆ ಕೇವಲ ರಾಜಕೀಯ ಲಾಭ ನಷ್ಟದ ವಿಚಾರವಲ್ಲ ಎನ್ನುವುದು ಮಂದಿರ ಲೋಕಾರ್ಪಣೆ ಮಾಡಿದ ಬಳಿಕ ಸಾಬೀತಾಗಿದೆ.

ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜೀವಂತವಿದ್ದಾಗ ಅವರನ್ನು ಲೋಕಸಭೆಗೆ ಪ್ರವೇಶಿಸಲು ಕಾಂಗ್ರೆಸ್‌ ಬಿಡಲಿಲ್ಲ. ಅವರ ಹೆಸರು ಹೇಳಲು ಕೂಡ ಕಾಂಗ್ರೆಸ್‌ಗೆ ಯೋಗ್ಯತೆ ಇಲ್ಲ. ಬಾಬಾ ಸಾಹೇಬರ ಅಂತ್ಯಸಂಸ್ಕಾರ ಮಾಡಲು ಕಾಂಗ್ರೆಸ್‌ ಜಾಗ ಕೂಡ ನೀಡಲಿಲ್ಲ. ದಲಿತರನ್ನು ಉದ್ಧಾರ ಮಾಡುವ ಹಾಗಿದ್ದರೆ ಅವರಿಗೆ ಮೀಸಲಾದ ಹಣದಲ್ಲಿ 11 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗೆ ಬಳಸಲಾಗಿದೆ. ಇದರ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಿತ್ತು ಎಂದರು.

ಒಂದಾಗಿ ಕೆಲಸ ಮಾಡುತ್ತೇವೆ ಬಿಜೆಪಿ ಪಕ್ಷದಲ್ಲಿ ಅಭ್ಯರ್ಥಿ ಆರಿಸುವಾಗ ಒಂದೇ ಬಾರಿಗೆ ತೀರ್ಮಾನಿಸಲಾಗುತ್ತದೆ. ಹಿರಿಯ ನಾಯಕರಾದ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರಿಗೆ ಸ್ವಾಭಾವಿಕವಾಗಿಯೇ ಬೇಸರವಾಗಿದೆ. ಆದರೂ ಅದನ್ನು ಮೀರಿ ಅವರು ಪಕ್ಷದ ಕಟ್ಟಾಳಾಗಿ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ. ಅವರನ್ನು ಕೂಡ ಭೇಟಿಯಾಗಿ ಚರ್ಚಿಸುತ್ತೇನೆ. ಎಲ್ಲರೂ ಒಂದಾಗಿ ಕೆಲಸ ಮಾಡಲಿದ್ದೇವೆ ಎಂದು ಡಾ.ಕೆ.ಸುಧಾಕರ್‌ ಹೇಳಿದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ