Featured
ಲಾಕ್‌ಡೌನ್ ಹೊರತಾಗಿ ಸರ್ಕಾರ ಏನೆಲ್ಲಾ ಮಾಡಲಿದೆ? – ಸಿಎಂ ಸುದೀರ್ಘ ಸಭೆಯಲ್ಲಿ ನಡೆದಿದ್ದೇನು..?
ರೈಸಿಂಗ್ ಕನ್ನಡ :
ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ಸಂಖ್ಯೆ ಏರುತ್ತಲೆ ಇದೆ. ಕೊರೊನಾ ವಿಷ್ಯವನ್ನ ಗಂಭೀರವಾಗಿ ಪರಿಗಣಿಸಿರೋ ರಾಜ್ಯ ಸರ್ಕಾರ, ಲಾಕ್‌ಡೌನ್ ಹೊರತಾಗಿ ಯಾವೆಲ್ಲಾ ಕ್ರಮ ಕೈಗೊಳ್ಳಬಹುದು ಅನ್ನೋದ್ರ ಬಗ್ಗೆ ಸುದೀರ್ಘ ಸಭೆ ನಡೆಸಿತು. ಕೋವಿಡ್ 19 ಪರಿಸ್ಥಿತಿ ಪರಿಶೀಲನೆ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು ಏನು ಅನ್ನೋದನ್ನ ನೋಡೋಣ ಬನ್ನಿ.
1. ರೋಗಿಗಳು ಕಾಯುವ ಪರಿಸ್ಥಿತಿ ಬರಬಾರದು. ಪರೀಕ್ಷಾ ವರದಿ ಬಂದು ಸೋಂಕು ದೃಢ ಪಟ್ಟ ನಂತರ ತ್ವರಿತವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಕ್ರಮ ವಹಿಸಲು ಸೂಚಿಸಲಾಗಿದೆ. ಇದಕ್ಕಾಗಿ ಈಗ 100 ಅಂಬ್ಯುಲೆನ್ಸ್ ಗಳು ಲಭ್ಯವಿದ್ದು, ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಅಂಬ್ಯುಲೆನ್ಸ್ ಗಳನ್ನು ಈ ಉದ್ದೇಶಕ್ಕೆ ಬಳಸಲು ತೀರ್ಮಾನಿಸಲಾಯಿತು.
2. ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ ಕೋವಿಡ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸಚಿವರಿಗೆ ಸೂಚಿಸಲಾಗಿದೆ
3. ಹೆಚ್ಚುತ್ತಿರುವ ಪ್ರಕರಣಗಳಿಗೆ ತಕ್ಕಂತೆ ಹಾಸಿಗೆಗಳ ಲಭ್ಯತೆಯನ್ನು ಖಾತರಿ ಪಡಿಸುವ ನಿಟ್ಟಿನಲ್ಲಿ, ರೋಗ ಲಕ್ಷಣ ಕಡಿಮೆ ಇರುವವರಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಹಾಗೂ ರೋಗ ಲಕ್ಷಣ ಇಲ್ಲದವರಿಗೆ ಖಾಸಗಿ ಹೋಟೆಲ್ ಗಳು ಹಾಗೂ ಹಜ್ ಭವನದಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ.
4. ಹಾಸಿಗೆಗಳ ಲಭ್ಯತೆ ಕುರಿತು, ಪ್ರತಿ ರೋಗಿಯ ದಾಖಲಿಸುವ ಕುರಿತು ಕ್ಷಣ ಕ್ಷಣದ ಮಾಹಿತಿ ಒದಗಿಸುವ ಕುರಿತು ಡಿಜಿಟಲ್ ಪ್ಲಾಟ್ ಫಾರ್ಮ್ ಸೃ಼ಜಿಸಲು ನಿರ್ಧರಿಸಲಾಯಿತು.
5. ರಾಜ್ಯದಲ್ಲಿ ಶೇ. 61 ರಷ್ಟು ಜನ ಗುಣಮುಖರಾಗಿದ್ದಾರೆ. 3700 ಸಕ್ರಿಯ ಪ್ರಕರಣಗಳು ಇವೆ.
6. ಇಲಾಖೆಗಳು ಈ ನಿಟ್ಟಿನಲ್ಲಿ ಸಮನ್ವಯದಿಂದ ಕ್ರಮ ವಹಿಸುವಂತೆ ಸೂಚಿಸಲಾಯಿತು.
7. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಸಚಿವರು, ಶಾಸಕರ ಸಭೆ ನಡೆಸಲಾಗುವುದು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?