Connect with us

Featured

ಭಾನುವಾರದಿಂದಲೇ ಶೆ. 50 ರಷ್ಟು ಹಾಸಿಗೆ ಒದಗಿಸಿ – ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಸಿಎಂ ಸೂಚನೆ..!

ರೈಸಿಂಗ್ ಕನ್ನಡ :

ಬೆಂಗಳೂರು :

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿ, ಚರ್ಚಿಸಿದರು.
ಬೆಂಗಳೂರು ನಗರದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಇನ್ನೂ ಹೆಚ್ಚಿನ ಸಹಕಾರ ನೀಡುವ ಅಗತ್ಯವಿದೆ. ಕೆಲವೆಡೆಗಳಲ್ಲಿ ಕೋವಿಡ್ ಹಾಗೂ ಕೋವಿಡ್ ಅಲ್ಲದ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ರು.

ಹಾಗೆಯೇ ಕೋವಿಡ್‍ಗೆ ಚಿಕಿತ್ಸೆ ಅಗತ್ಯವಿರುವವರು ಹಾಗೂ ಇತರ ಸಮಸ್ಯೆಗಳಿಂದ ಬಳಲುತ್ತಿರುವವರು ಸೂಕ್ತ ಚಿಕಿತ್ಸೆ ದೊರೆಯದೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವ ಹಾಗೂ ಹಲವರು ಪ್ರಾಣ ತ್ಯಾಗ ಮಾಡಿದ ದಾರುಣ ಘಟನೆಗಳ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಕೋವಿಡ್ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿಯಾಗಿತ್ತು. ಮುಂದೆಯೂ ಮಾದರಿಯಾಗಿರಬೇಕು ಎಂಬ ಆಶಿಸಿದ್ರು.

Advertisement

ಹಿಂದಿನ ಸಭೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2 ಸಾವಿರ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 4,500 ಹಾಸಿಗೆಗಳು ದೊರೆಯುವುದು ಎಂದು ಒಮ್ಮತದ ತೀರ್ಮಾನಕ್ಕೆ ಬರಲಾಗಿತ್ತು. ಆದರೆ ಖಾಸಗಿ ವೈದ್ಯಕೀಯ ಕಾಲೇಜುಗಳು ಅಷ್ಟು ಸಂಖ್ಯೆಯ ಹಾಸಿಗೆಗಳನ್ನು ಒದಗಿಸದೆ ಇರುವುದು ಹಾಗೂ ಇನ್ನೂ ಅನೇಕ ಸಮಸ್ಯೆಗಳು ನಮ್ಮ ಸಚಿವರುಗಳು ಕೆಲವು ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿದಾಗ ತಿಳಿದುಬಂದಿದೆ ಎಂದು ಮುಖ್ಯಮಂತ್ರಿಯವರು ಅಸಮಾಧಾನ ವ್ಯಕ್ತಪಡಿಸಿದರು.

ಇಂದಿನ ಈ ತುರ್ತು ಸಂದರ್ಭದಲ್ಲಿ ಮಾನವೀಯತೆಯಿಂದ ಕೋವಿಡ್ ಚಿಕಿತ್ಸೆಗೆ ಸಹಕರಿಸಬೇಕು. ಕೋವಿಡ್ ಇಲ್ಲದ ಇತರ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸದೆ, ರಾಜ್ಯದ ವೈದ್ಯಕೀಯ ವ್ಯವಸ್ಥೆಯಲ್ಲಿ ಸಮತೋಲನ ಇರುವಂತೆ ಎಚ್ಚರ ವಹಿಸಬೇಕು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಸಲಹೆ ಮಾಡಿದರು. ಇದಲ್ಲದೆ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ. 50 ರಷ್ಟು ಹಾಸಿಗೆಗಳನ್ನು ಭಾನುವಾರದಿಂದಲೇ ಕೋವಿಡ್ ಚಿಕಿತ್ಸೆಗೆ ಒದಗಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ವೈದ್ಯರು, ನರ್ಸ್ ಗಳ ಕೊರತೆ ಇದ್ದರೆ, ಸರ್ಕಾರವೇ ನೇಮಕ ಮಾಡುವುದು. ಯಾವುದೇ ರೀತಿಯ ಬೆಂಬಲ ಅಗತ್ಯವಿದ್ದರೂ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿಯವರು ಭರವಸೆ ನೀಡಿದರು.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ