Connect with us

ಕ್ರೀಡೆ

ಇಶಾನ್ ಕಿಶನ್​ಗೆ ಮತ್ತೊಂದು ಎಚ್ಚರಿಕೆ ನೀಡಿದ ಕೋಚ್ ದ್ರಾವಿಡ್..!

Cricket : ವಾಸ್ತವವಾಗಿ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬಳಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ವಾಪಸ್ಸಾತಿಯ ಬಗ್ಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ದ್ರಾವಿಡ್, ಕಿಶನ್​ಗೆ ಮತ್ತೊಮ್ಮೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ ತಂಡ 106 ರನ್‌ಗಳಿಂದ ಗೆದ್ದುಕೊಂಡಿದೆ. ತಂಡದ ಅಮೋಘ ಗೆಲುವಿನ ನಂತರ ಮಾತನಾಡಿದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಆಟಗಾರರ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ದ್ರಾವಿಡ್ ತಂಡದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್​ ಬಗ್ಗೆಯೂ ಮಾತನಾಡಿದ್ದಾರೆ.

ವಾಸ್ತವವಾಗಿ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬಳಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ವಾಪಸ್ಸಾತಿಯ ಬಗ್ಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ದ್ರಾವಿಡ್, ಕಿಶನ್​ಗೆ ಮತ್ತೊಮ್ಮೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ದ್ರಾವಿಡ್, ಪ್ರಸ್ತುತ ವಿಶ್ರಾಂತಿಯಲ್ಲಿರುವ ಇಶಾನ್ ಕಿಶನ್ ಮತ್ತೆ ದೇಶೀ ಕ್ರಿಕೆಟ್ ಆಡಲು ಆರಂಭಿಸಬೇಕು. ಆ ನಂತರವೇ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ.

ಅಲ್ಲದೆ ಟೀಮ್ ಮ್ಯಾನೇಜ್‌ಮೆಂಟ್ ಇಶಾನ್ ಜೊತೆ ನಿರಂತರವಾಗಿ ಸಂಪರ್ಕದಲ್ಲಿದೆ. ಸದ್ಯ ಕಿಶನ್ ಟೀಂ ಇಂಡಿಯಾದಿಂದ ರಜೆ ಕೇಳಿದ್ದರು. ಅವರ ಕೋರಿಕೆಯಂತೆ ಮ್ಯಾನೇಜ್‌ಮೆಂಟ್ ಕೂಡ ಅವರಿಗೆ ವಿಶ್ರಾಂತಿ ನೀಡಿದೆ. ಇದೀಗ ಅವರು ತಂಡಕ್ಕೆ ಮರಳಬೇಕೆಂದರೆ ಅವರು ಕ್ರಿಕೆಟ್ ಆಡಬೇಕಾಗುತ್ತದೆ.

ಆದರೆ ಕಿಶನ್ ಇನ್ನು ಕ್ರಿಕೆಟ್ ಆಡಲು ಆರಂಭಿಸಿಲ್ಲ. ಇದರರ್ಥ ಅವರಿಗಿನ್ನು ವಿಶ್ರಾಂತಿ ಅವಶ್ಯಕತೆ ಇದೆ ಎಂದು ತೋರುತ್ತದೆ. ಮೊದಲು ಕಿಶನ್ ತಾನು ಯಾವಾಗ ಆಡಲು ಸಿದ್ಧ ಎಂಬುದನ್ನು ತೀರ್ಮಾನಿಸಬೇಕು. ಯಾವಾಗ ಮತ್ತೆ ಆಡಲು ಸಿದ್ಧರಾಗುತ್ತಾರೆ ಎಂಬುದು ಇಶಾನ್ ಅವರ ಆಯ್ಕೆಯಾಗಿದೆ.

ತಂಡವು ತನ್ನ ಮೇಲೆ ಯಾವುದೇ ಒತ್ತಡವನ್ನು ಹೇರುತ್ತಿಲ್ಲ. ಆದರೆ ಕಿಶನ್ ತಂಡಕ್ಕೆ ಪುನರಾಗಮನ ಮಾಡಲು ಅವರು ಮೊದಲು ದೇಶೀಯವಾಗಿ ಆಡಬೇಕಾಗುತ್ತದೆ. ಪ್ರಸ್ತುತ ನಮಗೆ ತಂಡದ ಆಯ್ಕೆಗೆ ಸಾಕಷ್ಟು ಆಯ್ಕೆಗಳಿವೆ ಮತ್ತು ಆಯ್ಕೆದಾರರು ಎಲ್ಲಾ ಆಯ್ಕೆಗಳನ್ನು ಪರಿಗಣಿಸುತ್ತಾರೆ ಎಂದು ದ್ರಾವಿಡ್ ಹೇಳಿದ್ದಾರೆ.

ಇದರರ್ಥ ಇಶಾನ್ ಕಿಶನ್ ದೇಶೀ ಕ್ರಿಕೆಟ್ ಆಡದ ಹೊರತು ಟೀಂ ಇಂಡಿಯಾಕ್ಕೆ ಆಯ್ಕೆಯಾಗುವುದು ಅಸಾಧ್ಯ ಎಂಬುದನ್ನು ಇಲ್ಲಿ ದ್ರಾವಿಡ್ ಖಚಿತಪಡಿಸಿದ್ದಾರೆ. ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ದ್ರಾವಿಡ್ ಇದೇ ಕಿವಿ ಮಾತನ್ನು ಕಿಶನ್​ಗೆ ಹೇಳಿದ್ದರು. ಆದರೆ ಕಿಶನ್ ಮಾತ್ರ ಇದುವರೆಗೆ ರಣಜಿಯಲ್ಲಿ ಆಡುವ ಮನಸ್ಸು ಮಾಡಿಲ್ಲ.

ವಾಸ್ತವವಾಗಿ ಕಿಶನ್​ರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ತಂಡದಲ್ಲಿ ಆಯ್ಕೆ ಮಾಡಲಾಗಿತ್ತು. ಆದರೆ ಸರಣಿ ಆರಂಭಕ್ಕೂ ಮುನ್ನವೇ ಕಿಶನ್ ತಂಡವನ್ನು ತೊರೆಯಲು ನಿರ್ಧರಿಸಿದ್ದರು. ಅದರಂತೆ ಕಿಶನ್​ರನ್ನು ಟೆಸ್ಟ್ ಸರಣಿಯಿಂದ ಕೈಬಿಡಲಾಗಿತ್ತು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ