Connect with us

ರಾಜಕೀಯ

ಕಲ್ಲಿದ್ದಲು ವಲಯ ಈಗ ಹಗರಣಗಳಿಂದ ಮುಕ್ತಿ : ಪ್ರಹ್ಲಾದ ಜೋಶಿ

ಹುಬ್ಬಳ್ಳಿ; ಒಂದು ಕಾಲದಲ್ಲಿ ಕಲ್ಲಿದ್ದಲು ಹಗರಣಗಳದ್ದೇ ಸದ್ದಿರುತ್ತಿತ್ತು. ಆದರೀಗ ಕಲ್ಲಿದ್ದಲು ವಲಯ ಹಗರಣ, ಭ್ರಷ್ಟಾಚಾರದಿಂದ ಸಂಪೂರ್ಣ ಮುಕ್ತಿ ಪಡೆದಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಧಾರವಾಡ ಲೋಕಸಭಾ ಕ್ಷೇತ್ರದ ಪ್ರಗತಿಯ ನೋಟ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.ಹತ್ತು ವರ್ಷದ ಹಿಂದೆ ಕಲ್ಲಿದ್ದಲು ಎಂದರೆ ಹಗರಣಗಳದ್ದೇ ಚಿತ್ರಣ ಕಣ್ಣೆದುರು ಬರುತ್ತಿತ್ತು.ಆಗ ಭ್ರಷ್ಟಾಚಾರ ಮಿತಿ ಮೀರಿತ್ತು. ಆದರೆ, ನರೇಂದ್ರ ಮೋದಿ ಅವರ ಆಡಳಿತದಲ್ಲಿ ಆ ಕಪ್ಪು ಮಸಿ ಅಳಿಸಿ ಹೋಗಿದೆ ಎಂದು ಪ್ರತಿಪಾದಿಸಿದರು.

ಖಾತೆ ನೀಡುವಾಗ ಪ್ರಧಾನಿ ಮೋದಿ ಅವರು ‘ಮುಖಕ್ಕೆ ಮಸಿ ಬಳಿದುಕೊಳ್ಳಬೇಡ’ ಎಂದಿದ್ದರು. ಅವರ ಆಶಯದಂತೆ ಕಲ್ಲಿದ್ದಲು, ಗಣಿ ಖಾತೆಯಲ್ಲಿ ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಜೋಶಿ ಸಮರ್ಥಿಸಿಕೊಂಡರು. ಕಲ್ಲಿದ್ದಲಿನಂತಹ ಪ್ರಮುಖ ಖಾತೆ ಹೊಂದಿದ್ದರು ನನ್ನ ಕೈ ಕಪ್ಪು ಮಾಡಿಕೊಂಡಿಲ್ಲ. 20 ವರ್ಷದಲ್ಲಿ ಸಂಸದ, ಸಚಿವನಾಗಿ ಯಾವತ್ತೂ ತಲೆ ತಗ್ಗಿಸುವ ಕೆಲಸ ಮಾಡಿಲ್ಲ ಎಂದರು.

ಕಲ್ಲಿದ್ದಲಿನಲ್ಲಿ ಭಾರತ ಆತ್ಮ ನಿರ್ಭರ: ಕಲ್ಲಿದ್ದಲು ಉತ್ಪಾದನೆಯಲ್ಲಿ ಭಾರತ ಆತ್ಮ ನಿರ್ಭರ ಆಗಲಿದೆ. ದೇಶದಲ್ಲಿ ಈಗ 325 ವರ್ಷಗಳಿಗೆ ಆಗುವಷ್ಟು ಕಲ್ಲಿದ್ದಲು ಗಣಿ ಇದೆ. ಬರುವ ವರ್ಷಗಳಲ್ಲಿ ಕಲ್ಲಿದ್ದಲು ಆಮದು ಮಾಡಿಕೊಳ್ಳುವುದಿಲ್ಲ. ಅಂಥ ಒಂದು ಸುಸ್ಥಿತಿಗೆ ಹೆಜ್ಜೆ ಇಡುತ್ತಿದ್ದೇವೆಂದು ಹೇಳಿದರು.

Advertisement

ಮೋದಿ ಸರ್ಕಾರ ಬರುವ ಮೊದಲು ಗಣಿಯಿಂದ ಒರಿಸ್ಸಾ ಆದಾಯ 5000 ಕೋಟಿ ಇತ್ತು. ಅದೀಗ ಕೇಂದ್ರ ಸರ್ಕಾರದ ಪಾಲಿಸಿಗಳಿಂದಾಗಿ 5000 ಕೋಟಿ ರು. ಆಗಿದೆ. ಹೀಗೆ ರಾಜ್ಯ ಸರ್ಕಾರಗಳ ಬೊಕ್ಕಸಕ್ಕೂ ಶಕ್ತಿ ತುಂಬುತ್ತಿದೆ ಕಲ್ಲಿದ್ದಲು ಮತ್ತು ಗಣಿ ಸಚಿವಾಲಯ ಎಂದು ಸಚಿವ ಜೋಶಿ ತಿಳಿಸಿದರು.

1984ರ ನಂತರ ಯಾರೂ ಸಂಸದೀಯ ವ್ಯವಹಾರಗಳ ಖಾತೆ 5 ವರ್ಷ ಪೂರೈಸಿರಲಿಲ್ಲ. ತಾವದನ್ನು ಪೂರೈಸಿದ್ದಾಗಿ ಸಚಿವ ಜೋಶಿ ಸಂತಸ ಹಂಚಿಕೊಂಡರು. ಸಮಾರಂಭದಲ್ಲಿ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ಧಾರವಾಡದಲ್ಲಾದ ಅಭಿವೃದ್ಧಿ ಕುರಿತ ಪ್ರಗತಿಯ ನೋಟ ಪುಸ್ತಕ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೆಎಲ್ಇ ಸಂಸ್ಥೆ ಮುಖ್ಯಸ್ಥ ಪ್ರಭಾಕರ ಕೋರೆ, ಶಾಸಕರಾದ ಎಂ.ಆರ್.ಪಾಟೀಲ್, ಪ್ರದೀಪ್ ಶೆಟ್ಟರ್, ಮಾಜಿ ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ, ಹು-ಧಾ ಮಹಾನಗರ ಪಾಲಿಕೆ ಮೇಯರ್ ವೀಣಾ ಭರದ್ವಾಡ ಇದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ