Featured
ನಟ ದರ್ಶನ್ ವಿರುದ್ಧ ಹೈಕೋರ್ಟ್ನಲ್ಲಿ ದೂರು: ಚಾಲೆಂಜಿಂಗ್ ಸ್ಟಾರ್ ಮಾಡಿದ ತಪ್ಪಾದರೂ ಏನು ಗೊತ್ತಾ ?
![](https://risingkannada.com/wp-content/uploads/2020/07/darshan-mysore.jpg)
ರೈಸಿಂಗ್ ಕನ್ನಡ :
ಬೆಂಗಳೂರು :
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊರೊನಾಗೆ ಸಂಬಂಧಿಸಿದ ನೀತಿ ನಿಯಮಗಳನ್ನ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್ಗೆ ದೂರು ಕೊಡಲಾಗಿದೆ.
ಮೈಸೂರಿನಲ್ಲಿರುವ ನಟ ದರ್ಶನ್ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದರು. ಇದು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ನಗರದ ವಕೀಲೆ ಗೀತಾ ಮಿಶ್ರಾ ಹೈಕೋರ್ಟ್ಗೆ ಜ್ಞಾಪನಾ ಪತ್ರವನ್ನ ಬರೆದಿದ್ದಾರೆ.
![](https://risingkannada.com/wp-content/uploads/2020/07/darshanrs-secret-darshan-at-chamundeshwari-temple-21.jpg)
ಬರೀ ದರ್ಶನ್ ಮಾತ್ರವಲ್ಲ ಇತ್ತಿಚೆಗೆ ಸಂಸದೆ ಶೋಭಾ ಕರಂದ್ಲಾಜೆ , ಶಾಸಕ ಎಂ.ಕೆ.ಸೋಮಶೇಖರ್ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬಂದಾಗ ಮಾಸ್ಕ್ ಧರಸದೇ ಇತ್ತ ಸಾಮಾಜಿಕ ಅಂತರವನ್ನೂ ಕಾಪಡದೇ ಎಸ್ಒಪಿ ಮಾರ್ಗಸೂಚಿಗಳನ್ನ ಉಲ್ಲಂಘಿಸಿದ್ದಾರೆ. ಇವರ ಜೊತೆ ಅಬಕಾರಿ ಸಚಿವ ಎಚ್. ನಾಗೇಶ್ ಕೂಡ ತಮ್ಮ ಕಾರ್ಯಕರ್ತನೊಬ್ಬನ ಮಳಿಗೆಯೊಂದರ ಉದ್ಘಾಟನೆ ಮಾಡುವಾಗ ಮಾಸ್ಕ್ ಧರಿಸದೇ ಪಾರ್ಟಿ ಮಾಡಿದ್ದರು ಎಂದು ದೂರಲಾಗಿದೆ.
![Mobile no](https://risingkannada.com/wp-content/uploads/2020/07/rising-kannada-add-34.png)
ಕೊರೊನಾ ಮಾರ್ಗಸೂಚಿಗಳನ್ನ ಎಲ್ಲರೂ ತಪ್ಪದೇ ಪಾಲಿಸಬೇಕೆಂದು ಸರ್ಕಾರವೇ ಹೇಳಿರುವಾಗ ಕಾನೂನು ರೂಪಿಸುವ ಜನಪ್ರತಿನಿಧಿಗಳೇ ನಿಯಮಗಳನ್ನ ಉಲ್ಲಂಘಿಸುತ್ತಿದ್ದಾರೆ. ಸಾರ್ವಜನಿಕರೊಂದು ನಿಯಮ ಪ್ರಭಾವಿಗಳಿಗೊಂದು ನಿಯಮನಾ ಎಂದು ಪತ್ರದಲ್ಲಿ ಕೇಳಲಾಗಿದೆ. ಜೊತೆಗೆ ಇವರುಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಮಿಕ ರೋಗಗಳ ತಡೆ ಕಾಯ್ದೆ ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?