Featured
ಗಡಿಯಿಂದ ಸೇನೆ ಹಿಂದೆ ಸರಿದಿದೆ: ಚೀನಾ- ಚೀನಾ ಸುಳ್ಳು ಹೇಳುತ್ತಿದೆ: ಭಾರತ- ಯಾವುದು ಸತ್ಯ..? ಯಾವುದು ಸುಳ್ಳು..?
![](https://risingkannada.com/wp-content/uploads/2020/07/INDIAn-ARMY.jpg)
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಚೀನಾ ಮತ್ತು ಭಾರತ ನಡುವೆ ಗಡಿ ಗಲಾಟೆ ಜೋರಾಗಿ ನಡೆಯುತ್ತಿದೆ. ಭಾರತ ತನ್ನ ಸೈನ್ಯಕ್ಕೆ ಒಂದೊಂದೇ ಅಸ್ತ್ರಗಳನ್ನು ಸೇರಿಸಿಕೊಳ್ಳುತ್ತಿದೆ. ಈ ಮಧ್ಯೆ ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡೂ ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂದೆ ಸರಿದಿವೆ ಎಂದು ಚೀನಾದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ. ಅಲ್ಲದೆ ಗಡಿಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಹೇಳಿದ್ದಾರೆ.
ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್ ಗಲ್ವಾನ್, ಗೊಗ್ರಾ ಮತ್ತು ಹಾಟ್ ಸ್ಪ್ರಿಂಗ್ನಿಂದ ಎರಡೂ ದೇಶಗಳ ಸೈನಿಕರು ಹಿಂದಕ್ಕೆ ಸರಿದಿದ್ದಾರೆ. ಗಡಿಯ ಉದ್ದಕ್ಕೂ ಇದ್ದ ಸೈನಿಕರನ್ನು ಮಾತುಕತೆಗಳ ಮೂಲಕ ಹಿಂದಕ್ಕೆ ಕರೆಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಶಾಂತಿ ಮಾತುಕತೆ ಮೂಲಕ ಸಮಸ್ಯೆ ಪರಿಹಾರ ಕಾಣಬೇಕು ಎಂಬುದು ಎರಡೂ ರಾಷ್ಟ್ರಗಳ ಬಯಕೆಯಾಗಿದ್ದು, ಭಾರತ ಮತ್ತು ಚೀನಾ ಸೇನೆಗಳು ಮಾತುಕತೆಯಲ್ಲಿ ತೊಡಗಿವೆ ಎಂದು ಹೇಳಿದ್ದಾರೆ.
![Puranik Full](https://risingkannada.com/wp-content/uploads/2020/07/full-plate.jpg)
ಲಡಾಖ್ ಗಡಿಯಿಂದ ಬಹುತೇಕವಾಗಿ ಸೈನ್ಯ ತುಕಡಿಗಳನ್ನು ಹಿಂಪಡೆಯಲಾಗಿದೆ ಎಂಬ ಚೀನಾದ ಘೋಷಣೆಯನ್ನು ತಳ್ಳಿಹಾಕಿರುವ ಭಾರತ, ಈ ಹೇಳಿಕೆ ಸರಿಯಲ್ಲ ಎಂದು ಹೇಳಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?