Featured
ಅಗಲಿದ ಕೇಂದ್ರ ಸಚಿವ ಸುರೇಶ್ ಅಂಗಡಿಗೆ ವಿಧಾನಸಭೆಯಲ್ಲಿ ಸಂತಾಪ

ರೈಸಿಂಗ್ ಕನ್ನಡ:
ಬೆಂಗಳೂರು:
ಕೊರೊನಾಗೆ ಬಲಿಯಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ವಿಧಾನಸಭಾ ಸದಸ್ಯರು ಸಂತಾಪ ನಿರ್ಣಯ ಕೈಗೊಂಡು ಗೌರವ ಅರ್ಪಿಸಿದರು. ಎಲ್ಲಾ ಶಾಸಕರು ಮೌನಾಚರಿಸಿ ಗೌರವ ಸಲ್ಲಿಸಿದರು.
ಗುರುವಾರ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅವರು ಸುರೇಶ್ ಅಂಗಡಿಯವರು ನಿಧನದ ಸುದ್ದಿಯನ್ನ ಪ್ರಕಟಿಸಿ ಸಂತಾಪ ಸೂಚಕ ನಿರ್ಣಯವನ್ನ ಮಂಡಿಸಿದರು.
ಸಿಎಂ ಯಡಿಯೂರಪ್ಪ ಮಾತನಾಡಿ,ಸುರೇಶ್ ಅಂಗಡಿ ನಿಧನ ಆಘಾತ ತಂದಿದೆ. ಕರ್ನಾಟಕ ರೈಲಿಗೆ ಅವರು ಅಪಾರ ಕೊಡುಗೆ ನೀಡಿದ್ದಾರೆ. ಪ್ರಮಾಣಿಕತೆ ಮತ್ತು ಜನಾನುರಾಗಿ ನಾಯಕರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ.ಅವರ ಕುಟುಂಬಕ್ಕೆ ನೋವು ತಡೆಯುವ ಶಕ್ತಿ ಸಿಗಲಿ ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಸುರೇಶ್ ಅಂಗಡಿ ಸಜ್ಜನ ಮತ್ತು ಸ್ನೇಹ ಜೀವಿಯಾಗಿದ್ದರು. ಇವರು ಕೊರೊನಾಗೆ ಬಲಿಯಾಗುತ್ತಾರೆಂದು ಯಾರು ಕೂಡ ಭಾವಿಸಿರಲಿಲ್ಲ. ಪ್ರಖ್ಯಾತ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆತಿದ್ದರೂ ಅವರು ನಿಧನರಾಗಿದ್ದಾರೆ. ಇದರಿಂದ ರಾಜಕಾರಣಿಗಳಿಗೆ ಭಯ ಶುರುವಾಗಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ಯಮನಿಗೆ ಯಾರ ಬಗ್ಗೆಯು ಕರುಣೆ ಇಲ್ಲ.ದೇವರ ಮೇಲೂ ನಂಬಿಕೆ ಕಳೆದುಕೊಳ್ಳುವ ಸಂದರ್ಭ ಬಂದಿದೆ. ಅವರ ನಿಧನ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು.
ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಉಪಸಭಾಧ್ಯಕ್ಷ ಆನಂದ್ ಮಾಮನಿ,ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಾಪಾಂಡೆ, ಶಾಸಕ ಬಂಡೇಪ್ಪ ಕಾಶೆಂಪುರ್ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಗಲಿದ ಸುರೇಶ್ ಅಂಗಡಿ ಅವರೊಂದಿಗಿನ ಒಡನಾಟವನ್ನ ನೆನೆದರು.
ನಂತರ ಒಂದು ನಿಮಿಷ ಮೌನಾಚರಣೆ ಮಾಡಿ ಸಂತಾಪ ಸೂಚಕ ನಿರ್ಣಯಗಳನ್ನ ಸುರೇಶ್ ಅಂಗಡಿ ಕುಟುಂಬಕ್ಕೆ ಕಳುಹಿಸಿಕೊಡುವುದಾಗಿ ಹೇಳಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?