Featured
ದೆಹಲಿ ನಾಯಕರಿಗೆ ಜೆಡಿಎಸ್ ಬೇಕು..! ಕರ್ನಾಟಕದ ಕಾಂಗ್ರೆಸಿಗರಿಗೆ ಜೆಡಿಎಸ್ ಬೇಡ : ಕುಮಾರಸ್ವಾಮಿ ಹೀಗೆ ಹೇಳಿದ್ದು ಯಾಕೆ..? ಯಾರಿಗೆ..?
ಮೈಸೂರು : ಕರ್ನಾಟಕದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗ್ತಿದ್ದಂತೆ ರಾಜ್ಯ ರಾಜಕೀಯ ಮತ್ತಷ್ಟು ಗರಿಗೆದರಿದೆ. 14 ತಿಂಗಳ ಕಾಲ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಉಪಚುನಾವಣೆಗೆ ಬಹುತೇಕ ಇರೋದಿಲ್ಲ ಎನ್ನಲಾಗಿದೆ. ಈಗಾಗ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ ಮಾಡಿದಂತೆ 15 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ಈ ನಡುವೆ, ಮಾಜಿ ಸಿಎಂ ಹೆಚ್ಡಿಕೆ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ದೆಹಲಿ ಮಟ್ಟದ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಜೊತೆ ಮೈತ್ರಿ ಹಾಗೂ ದೋಸ್ತಿ ಬೇಕು. ಆದ್ರೆ, ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಜೊತೆ ಮೈತ್ರಿ ಹಾಗೂ ದೋಸ್ತಿ ಬೇಕಿಲ್ಲ ಎಂದಿದ್ದಾರೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಆದ್ರೆ, ಕುಮಾರಸ್ವಾಮಿ ತಮ್ಮ ಮಾತಿನಲ್ಲಿ ಎಲ್ಲೂ ಕೂಡ ನಾಯಕರ ಹೆಸರನ್ನ ಪ್ರಸ್ತಾಪ ಮಾಡಿಲ್ಲ. ಮೈತ್ರಿ, ದೋಸ್ತಿ ಬೇಡ ಎನ್ನುತ್ತಿರುವ ಕಾಂಗ್ರೆಸ್ನ ರಾಜ್ಯ ನಾಯಕರು ಯಾರು ಅನ್ನೋದನ್ನ ಹೇಳದೆ, ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಗೂಬೆ ಕೂರಿಸೋ ಕೆಲಸ ಮಾಡಿದ್ದಾರೆ.
ಅದೇನೇ ಆಗ್ಲಿ, ಚುನಾವಣೆ ಘೋಷಣೆ ಆಗಿದ್ದು ರಾಜ್ಯದಲ್ಲಿ ಮತ್ತೊಮ್ಮೆ ರಾಜಕೀಯ ಮೇಲಾಟಗಳು ನಡೆಯೋದಂತೂ ಸತ್ಯ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?