Connect with us

ರಾಜಕೀಯ

50 ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ: ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಮಾಗಮದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ತ್ರಿಬಲ್‌ ಎಂಜಿನ್‌ನ ಗೆಲುವಿನ ಗಾಳಿ ಬೀಸುತ್ತಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.ನೆಲಮಂಗಲ ಮತ್ತು ದೊಡ್ಡಬಳ್ಳಾಪುರದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಡಾ.ಕೆ.ಸುಧಾಕರ್‌ ಪ್ರಚಾರ ನಡೆಸಿದರು.

ನಂತರ ಮಾತನಾಡಿದ ಡಾ.ಕೆ.ಸುಧಾಕರ್‌, ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಇರುವವರೆಗೂ ಕಾಂಗ್ರೆಸ್‌ ವಿರೋಧ ಪಕ್ಷದ ಸ್ಥಾನದಲ್ಲೇ ಉಳಿಯಲಿದೆ. ಬಿಜೆಪಿ ಯಾವಾಗಲೂ ಆಡಳಿತದ ಸ್ಥಾನದಲ್ಲಿದ್ದು ಜನ ಕಲ್ಯಾಣ ಕಾರ್ಯಗಳನ್ನು ಮಾಡಲಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ನೀರಾವರಿಗೆ ಕೊಟ್ಟಷ್ಟು ಕೊಡುಗೆಗಳನ್ನು ಯಾರೂ ಕೊಟ್ಟಿಲ್ಲ. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಕೆಟ್ಟದಾಗಿ ಹೇಳಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ಅದರೆ ಮಹಿಳೆಯರಿಗಾಗಿಯೇ ಕುಮಾರಸ್ವಾಮಿ ಸಾರಾಯಿ ನಿಷೇಧ ಮಾಡಿದ್ದರು. ರೈತರ ಸಾಲ ಮನ್ನಾ ಮಾಡಿದ್ದರು. ಕಾಂಗ್ರೆಸ್‌ಗೆ ಹೇಳಲು ಸಾಧನೆಗಳ ಸರಕು ಇಲ್ಲದೆ ಈ ರೀತಿಯ ತಂತ್ರ ಹೆಣೆಯುತ್ತಿದೆ ಎಂದರು.

ಕಾಂಗ್ರೆಸ್‌ ಇಂಡಿ ಕೂಟ ಮಾಡಿಕೊಂಡು ಮಂಡಿಯಲ್ಲಿ ಭಾರತವನ್ನೇ ಮಾರಾಟ ಮಾಡಲು ಮುಂದಾಗಿದೆ. 40 ಸ್ಥಾನಕ್ಕಿಂತ ಹೆಚ್ಚು ಬರಲ್ಲ ಎನ್ನುವುದು ಗೊತ್ತಿರುವುದರಿಂದ ಹಾಗೂ ಮುಂದಿನ 50 ವರ್ಷ ಅಧಿಕಾರ ಸಿಗದಿರುವುದು ಖಚಿತವಾಗಿರುವುದರಿಂದ ಗ್ಯಾರಂಟಿ ಕಾರ್ಡುಗಳನ್ನು ನೀಡುತ್ತಿದ್ದಾರೆ. 2,000 ರೂ. ಕೊಡುತ್ತಿರುವುದರಿಂದಲೇ ರಾಜ್ಯದ ಸ್ಥಿತಿ ಅಧೋಗತಿಗೆ ಸಾಗಿದೆ. ದೇಶದ ಬೊಕ್ಕಸದಿಂದ ಇದೇ ರೀತಿ ಹಣ ನೀಡಿದರೆ ಇಡೀ ದೇಶ ಹಾಳಾಗಲಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶವನ್ನು ಪಾಕಿಸ್ತಾನಕ್ಕಿಂತ ಹಿಂದಕ್ಕೆ ಕೊಂಡೊಯ್ಯಲಿದೆ ಎಂದರು.

ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ಮೊತ್ತವನ್ನು ಗ್ಯಾರಂಟಿಗೆ ಬಳಸಲಾಗಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡದೆ ದೆಹಲಿಗೆ ಕಳುಹಿಸಲಾಗಿದೆ. ದಲಿತರ ಬಗ್ಗೆ ಕಾಂಗ್ರೆಸ್‌ಗೆ ಗೌರವ ಇದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಬೇಕಿತ್ತು. ಡಾ.ಬಿ.ಆರ್‌.ಅಂಬೇಡ್ಕರ್‌ರ ಹೆಸರು ಹೇಳಲು ಕಾಂಗ್ರೆಸ್‌ ಯೋಗ್ಯತೆ ಮತ್ತು ನೈತಿಕತೆ ಇಲ್ಲ. ಬಾಬಾ ಸಾಹೇಬರನ್ನು ಎರಡು ಬಾರಿ ಸೋಲಿಸಿದ್ದೇ ಕಾಂಗ್ರೆಸ್‌ ಎಂದರು.

Advertisement

ಹಿಂದೂಗಳು ಮತ ನೀಡಬೇಕಾ?

ಕಾಂಗ್ರೆಸ್‌ನ ಅಭ್ಯರ್ಥಿ ಕ್ಯಾಶ್‌ ಪಾರ್ಟಿ. ಅವರ ಖಾತೆಯಲ್ಲಿನ ಹಣ ನೋಡಿ ಟಿಕೆಟ್‌ ನೀಡಿದ್ದಾರೆ. ನಾನು ಆರೋಗ್ಯ ಸಚಿವನಾಗಿ, ಶಾಸಕನಾಗಿ ಕೆಲಸ ಮಾಡಿದ್ದನ್ನು ನೋಡಿ ಟಿಕೆಟ್‌ ನೀಡಿದ್ದಾರೆ. ಹಣದಿಂದ ಚುನಾವಣೆ ನಡೆಸಲು ಸಾಧ್ಯವಿಲ್ಲ, ಆದರೆ ಜನರ ಪ್ರೀತಿಯಿಂದ ಮಾತ್ರ ಅದು ಸಾಧ್ಯವಾಗುತ್ತದೆ ಎಂಬುದನ್ನು ಅಭ್ಯರ್ಥಿಯ ತಂದೆ ತಿಳಿಯಬೇಕು. ಇಂತಹ ಅಹಂಕಾರದ ಮಾತನ್ನಾಡಬಾರದು. ಕಾಂಗ್ರೆಸ್‌ ಸರ್ಕಾರ ಆಳಲು ಬಂದು ರಾಜ್ಯವನ್ನು ಹಾಳು ಮಾಡಿದೆ. ಕಾಂಗ್ರೆಸ್‌ ಅಭ್ಯರ್ಥಿ ಹೆಸರಿನಲ್ಲಿ ರಾಮ ಇದೆ, ಅವರಿಗೆ ಟಿಕೆಟ್ ಕೊಡಿಸಿದ್ವರಾ ಹೆಸರಿನಲ್ಲೂ ರಾಮ ಇದೆ, ಆದರೆ ಅವರು ರಾಮ ಮಂದಿರಕ್ಕೆ ಹೋಗುವುದಿಲ್ಲ ಅವರ ಹೃದಯದಲ್ಲಿ ರಾಮನ ಬಗ್ಗೆ ಭಕ್ತಿ ಇಲ್ಲ. ಇಂಥವರಿಗೆ ಹಿಂದೂಗಳು ಮತ ನೀಡಬೇಕಾ ಎಂದು ಪ್ರಶ್ನೆ ಮಾಡಿದರು.

ಪ್ರಧಾನಿ ಮೋದಿ ರಾಮ ಮಂದಿರದಲ್ಲಿ ಬಾಲರಾಮನನ್ನು ಪ್ರತಿಷ್ಠಾಪಿಸಿದ್ದಾರೆ. ಜೊತೆಗೆ ರಾಮರಾಜ್ಯವನ್ನು ಸ್ಥಾಪಿಸಿದ್ದಾರೆ. ಆದರೆ ಕಾಂಗ್ರೆಸ್‌ ಜನರ ಭವಿಷ್ಯದ ಜೊತೆ ಜೂಜಾಡಲು ಬಂದಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಬಡವರ ಪಾಲಿಗೆ ಕಾಂಗ್ರೆಸ್ ಸರ್ಕಾರ ಶಾಪವಾಗಿದ್ದು, ರಾಜ್ಯದ ಜನತೆಯ ಹಿತರಕ್ಷಣೆಗಾಗಿ ಬಿಜೆಪಿಯು ಜೆಡಿಎಸ್ ಜೊತೆ ಕೈ ಜೋಡಿಸಿದೆ. ಈ ಲೋಕಸಭಾ ಚುನಾವಣೆ ಒಂದು ಧರ್ಮ ಯುದ್ಧವಾಗಿದ್ದು, ಧರ್ಮದ ಪರ, ಸಾಮಾನ್ಯ ಜನರ ಪರವಾಗಿರುವ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಹೊಣೆ ನಮ್ಮ ಮೇಲಿದೆ ಎಂದರು.

ಬಡತನ ನಿವಾರಣೆ ಇಲ್ಲ, ಪಿಕ್‌ ಪಾಕೆಟ್‌ ಸರ್ಕಾರ

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ಹಿಂದೆ ಇಂದಿರಾಗಾಂಧಿ ಬಡತನ ನಿರ್ಮೂಲನೆ ಮಾಡುವ ಯೋಜನೆ ಜಾರಿ ಮಾಡಿದ್ದರೂ ಬಡತನ ನಿವಾರಿಸಿಲ್ಲ. ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ. ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದಿದ್ದೇವೆ ಎಂದು ಗ್ಯಾರಂಟಿಗಳನ್ನು ತೋರಿಸಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಮಹಿಳೆಯರಿಗೆ ಹಣ ನೀಡಿ, ಪುರುಷರಿಂದ ಹಣ ಪಡೆಯಲಾಗುತ್ತಿದೆ. ಇದು ಪಿಕ್‌ ಪಾಕೆಟ್‌ ಸರ್ಕಾರ ಎಂದು ಟೀಕಿಸಿದರು.

Advertisement

ಆರೋಗ್ಯ4 days ago

ಕಾಫಿ ಜೊತೆ 1 ಸ್ಪೂನ್‌ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!

ರಾಜಕೀಯ2 weeks ago

ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ

ಆರೋಗ್ಯ2 weeks ago

ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!

ಸಿನಿಮಾ2 weeks ago

ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ

ಸಿನಿಮಾ2 weeks ago

ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ

ಸಿನಿಮಾ2 weeks ago

ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!

ಜ್ಯೋತಿಷ್ಯ2 weeks ago

ಭಗವಾನ್ ರಾಮನಿಗೆ ಈ ವಸ್ತುಗಳನ್ನ ಅರ್ಪಿಸಿ, ಸಂತೋಷ-ಸಮೃದ್ಧಿ ಸಿಗುತ್ತೆ

ಬೆಂಗಳೂರು2 weeks ago

ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ, ರಜನಿಕಾಂತ್ ಸಂತಾಪ..!

ಕ್ರೀಡೆ3 weeks ago

ಟಾಸ್​​ ಗೆದ್ದ ಬೆಂಗಳೂರು ಟೀಂ, ಆರ್​​ಸಿಬಿ ಪ್ಲೇಯಿಂಗ್​ 11ನಿಂದ ಸಿರಾಜ್-ಮ್ಯಾಕ್ಸಿ​ ಔಟ್!

ಬೆಂಗಳೂರು3 weeks ago

ಶಿವರಾಜ್​ಕುಮಾರ್ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು ಕೋಟಿ ಸಾಲ ಗೊತ್ತಾ..?

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured10 months ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured10 months ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

ಆರೋಗ್ಯ2 years ago

ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್​ಡೌನ್​ ಫಿಕ್ಸಾ.?