Connect with us

ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೂ ಬಾಲಕೃಷ್ಣ ಅವರ ಹೇಳಿಕೆಗೂ ಸಂಬಂಧವಿಲ್ಲ

ಕೋಲಾರ : ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಅವರ ಹೇಳಿಕೆ ವೈಯಕ್ತಿಕ. ಕಾಂಗ್ರೆಸ್ ಪಕ್ಷಕ್ಕೂ ಬಾಲಕೃಷ್ಣ ಅವರ ಹೇಳಿಕೆಗೂ ಸಂಬಂಧವಿಲ್ಲ. ಲೋಕಸಭಾ ಚುನಾವಣಾ ಬಳಿಕ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಹೇಳಿದ್ದಾರೆ.

ಮಾಲೂರು ತಾಲೂಕಿನ ಟೇಕಲ್ ನಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಐಟಿಐ ಕಾಲೇಜಿಗೆ ಗುದ್ದಲಿ ಪೂಜೆ ನೆರವೇರಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಕೆ.ವೈ. ನಂಜೇಗೌಡ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಪಡೆಯದಿದ್ದರೆ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವುದು ಒಳ್ಳೆಯದು ಅಂತ ಬಾಲಕೃಷ್ಣ ಅವರ ಹೇಳಿಕೆ ವೈಯಕ್ತಿಕ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಸರ್ಕಾರದ ಹೇಳಿಕೆಯಲ್ಲ. ಹೆಚ್.ಸಿ.‌ಬಾಲಕೃಷ್ಣ ಅವರು ವೈಯಕ್ತಿಕವಾಗಿ ಹೇಳಿಕೆ ನೀಡಿದ್ದಾರಷ್ಟೇ.‌ ಅವರ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ.

ನುಡಿದಂತೆ ನುಡಿಯುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ. ಲೋಕಸಭಾ ಚುನಾವಣೆ ಬಳಿಕ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ನಿಲ್ಲಿಸುವುದಿಲ್ಲ. ಇದನ್ನು ಸಿಎಂ ಸಿದ್ದರಾಮಯ್ಯ ಹಲವು ಬಾರಿ ಹೇಳಿದ್ದಾರೆ. ನಮ್ಮ ಸರ್ಕಾರ ಬಡವರ ಪರ ಇರುವ ಸರ್ಕಾರ. ಬಡವರಿಗಾಗಿಯೇ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ.

 ಶ್ರೀರಾಮ ಬಿಜೆಪಿ ಪಕ್ಷದವರ ಸೃಷ್ಟಿಯಲ್ಲ, ಪ್ರತಿಯೊಬ್ಬರ  ಮನೆಯಲ್ಲಿ ರಾಮ ಇದ್ದಾನೆ. ಹಿಂದೂಗಳು ಸೇರಿದಂತೆ ಮುಸ್ಲಿಮ್ ನವರಿಗೂ ಶ್ರೀರಾಮನ ಇತಿಹಾಸ ಗೊತ್ತಿದೆ. ಆದರೆ ಬಿಜೆಪಿಯವರು ರಾಜಕೀಯ ಅನುಕೂಲಕ್ಕಾಗಿ ರಾಮನನ್ನು ಬಳಸಿಕೊಳ್ಳುತ್ತಿದ್ದಾರೆ. ಪ್ರತಿಯೊಂದು ಗ್ರಾಮದಲ್ಲಿಯೂ ದೇವಾಲಯಗಳಿವೆ. ಪ್ರತಿಯೊಬ್ಬರ ಮನೆಯಲ್ಲೂ ರಾಮನಿಗೆ ಪೂಜೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ 100% ಬಡವರ ಪಕ್ಷವಾಗಿದೆ. ಆದ್ರೆ ಬಿಜೆಪಿಯವರು ಯುವಕರನ್ನು ಯಾಮಾರಿಸಲು ಈ ರೀತಿಯ ಗಿಮ್ಮಿಕ್ಕು ಮಾಡ್ತಾರೆ. ಪ್ರತೀ ಲೋಕಸಭಾ ಚುನಾವಣೆ ಸಮಯಕ್ಕೆ ಬಿಜೆಪಿಯವರು ಈ ತರದ್ದು ಏನಾದ್ರು ತರ್ತಾರೆ. ರಾಮನ ಹೆಸರೇಳಿಕೊಂಡು ಹೊರಟಿದ್ದಾರೆ. ಆದ್ರೆ ಇವು ಹೆಚ್ಚು ದಿನ ನಡೆಯುವುದಿಲ್ಲ .

ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರೆಂದು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ಯಾರನ್ನೇ ಅಭ್ಯರ್ಥಿ ಮಾಡಿದ್ರೂ ಅವರನ್ನು ಗೆಲ್ಲಿಸುತ್ತೇವೆ. ಪಾರ್ಲಿಮೆಂಟ್ ಮೆಂಬರ್ ಅಂದ್ರೆ ಒಂದು ರೆಸ್ಪೆಕ್ಟ್ ಇತ್ತು. ಆದ್ರೆ ಕೆಟ್ಟ ಬಿಜೆಪಿ ಸಂಸದರನ್ನು ಬದಲಾವಣೆ ಮಾಡಲು ಜನ ಬಯಸಿದ್ದಾರೆ ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡುತ್ತೇವೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ