Uncategorized
ದಿನೇಶ್ ಗುಂಡೂರಾವ್ಗೆ 51ನೇ ಹುಟ್ಟುಹಬ್ಬದ ಸಂಭ್ರಮ: ಉಚಿತ ಗಡಿಯಾರ ವಿತರಿಸಿದ ಕಾರ್ಯಕರ್ತರು
![](https://risingkannada.com/wp-content/uploads/2020/10/dinesh-gundu-Rao-2.jpg)
ರೈಸಿಂಗ್ ಕನ್ನಡ:
ಗಾಂಧಿನಗರ:
ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರ 51 ನೇ ಹುಟ್ಟು ಹಬ್ಬದ ಪ್ರಯುಕ್ತ ಶುಕ್ರವಾರ ಬಳೇಪೇಟೆ ಕಾಶಿ ವಿಶ್ವೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಮತ್ತು ಅನ್ನದಾನ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಬಾರಿ ಕೋವಿಡ್ ಹಿನ್ನಲೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳದ ಮಾನ್ಯ ಶಾಸಕರಾದ ದಿನೇಶ್ ಗುಂಡೂರಾವ್, ಕಾರ್ಯಕರ್ತರಿಗೂ ಹುಟ್ಟು ಹಬ್ಬ ಆಚರಿಸದಂತೆ ಸಲಹೆ ನೀಡಿದ್ದರು. ಬದಲಿಗೆ ಹುಟ್ಟು ಹಬ್ಬದ ಅದ್ಧೂರಿ ಆಚರಣೆಯ ಬದಲು ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದರು.
![](https://risingkannada.com/wp-content/uploads/2020/10/Dinesh-Gundu-Rao-1-1024x768.jpg)
ಶಾಸಕ ದಿನೇಶ್ ಗುಂಡೂರಾವ್ ಅವರ ನಿರ್ದೇಶನದಂತೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಾಟನ್ ಪೇಟೆ, ಚಿಕ್ಕಪೇಟೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಮತ್ತು ಹತ್ತು ಸಾವಿರ ಗೋಡೆ ಗಡಿಯಾರಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದ ನೇತೃತ್ವವನ್ನು ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ಎಸ್.ಶ್ರೀನಿವಾಸಮೂರ್ತಿ ವಹಿಸಿದ್ದರು. ಇವರೊಂದಿಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಸರವಣನ್, ಕೆ.ವಿ.ಉಮೇಶ್ , ಕೆ.ಪಿ.ಸಿ.ಸಿ ಸದಸ್ಯ ರಘುನಾಥ್, ಮುಖಂಡರಾದ ನಿಜಗುಣ, ನಾಗೇಶ್, ಲಕ್ಷ್ಮಣ್, ಬಿಪಿನ್ ಬಾಫ್ನಾ, ಉದಯ್ ಕುಮಾರ್, ಮಹದೇವ್, ಯೋಗೀಶ್, ಸುನಿಲ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?