Featured
ಕೊರೊನಾ ಎಫೆಕ್ಟ್: ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಕೈ ಶಾಸಕ ನಾರಾಯಣ ರಾವ್ ನಿಧನ
![](https://risingkannada.com/wp-content/uploads/2020/09/mlanarayanarao-3-1600949338.jpg)
ರೈಸಿಂಗ್ ಕನ್ನಡ:
ಬೀದರ್:
ಕೊರೊನಾ ಸೋಂಕು ಹಾಗೂ ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ವಿಧಿವಶರಾಗಿದ್ದಾರೆ.
67 ವರ್ಷದ ಶಾಸಕ ನಾರಾಯಣ ರಾವ್ ಆ.31ರಂದು ಕೊರೊನಾ ಸೋಂಕಿಗೆ ಗುರಿಯಾಗಿದ್ದರು. ಮರು ದಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಮೊದಲು ಚೇತರಿಸಿಕೊಂಡಿದ್ದ ಶಾಸಕ ನಾರಾಯಣ ಅವರ ಆರೋಗ್ಯದಲ್ಲಿ ಏರು ಪೇರು ಕಂಡು ಬಂದಿತ್ತು.
ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಪರಿಸ್ಥಿತಿ ಕೈಕೊಟ್ಟಿತ್ತು.ಅಧಿಕ ರಕ್ತದೊತ್ತಡ, ಕಾಮಾಲೆ ರೋಗಗಳು ಹೈರಾಣಾಗುವಂತೆ ಮಾಡಿತು. ಕೃತಕ ಉಸಿರಾಟದ ವ್ಯವಸ್ಥೆ ಮಾಡಿದರು ಪ್ರಯೋಜನವಾಗಲಿಲ್ಲ.
ವಿಧಾನಸಭಾ ಕಲಾಪದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕ ಬಂಡೆಪ್ಪ ಕಾಶಂಪುರ್ ಸಂತಾಮ ಸೂಚಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?