Featured
ಕೊರೊನಾ ಶನಿವಾರದ ರಿಪೋರ್ಟ್ ನೋಡಿದ್ರೆ ಬೆಚ್ಚಿ ಬೀಳ್ತೀರಾ : ಒಂದೇ ದಿನ ದಾಖಲೆಯ 7,178 ಕೇಸ್ : ಮೃತರ ಸಂಖ್ಯೆ ಎಷ್ಟಾಯ್ತು ಗೊತ್ತಾ?

ರೈಸಿಂಗ್ ಕನ್ನಡ :
ಬೆಂಗಳೂರು :
ಮಹಾಮಾರಿ ಕೊರೊನಾ ಕರುನಾಡಲ್ಲಿ ತನ್ನ ಕ್ರೂರ ಅಟ್ಟಹಾಸ ಮೆರೆದಿದ್ದು ಒಂದೇ ದಿನ ದಾಖಲೆಯ 7 ಸಾವಿರ ಪ್ರಕರಣ ಪತ್ತೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆಯಲ್ಲಿ ಬಿಡುಗಡೆ ಮಾಡಿರುವ ವರದಿಯಲ್ಲಿ ರಾಜ್ಯದಲ್ಲಿ 7,178 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಇಷ್ಟು ದಿನಗಳಲ್ಲಿ ಇದೇ ದಾಖಲೆಯ ಸೋಂಕು ಇದಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,72,102ಕ್ಕೆ ಏರಿದೆ.
ಇನ್ನು ಸಾವಿನ ವಿಚಾರದಲ್ಲೂ ಕೊರೊನಾ ಆರ್ಭಟ ಮುಂದುವರೆದಿದ್ದು 93 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ 3,091ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 79,765 ಸಕ್ರಿಯ ಪ್ರಕರಣಗಳಿವೆ.
ಶನಿವಾರ 5006 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 89,238 ಮಂದಿ ಬಿಡುಗಡೆಯಾಗಿದ್ದಾರೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗುತ್ತಲ್ಲೇ ಇದ್ದು ಶನಿವಾರ 2,665 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72,237ಕ್ಕೆ ಏರಿಕೆಯಾಗಿದೆ. ಹೆಮ್ಮಾರಿ ಏಟಿಗೆ 18 ಮಂದಿ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 1218ಕ್ಕೆ ಏರಿದೆ. ರಾಜಧಾನಿಯಲ್ಲಿ 33,726 ಸಕ್ರಿಯ ಪ್ರಕರಣಗಳಿವೆ.
ಶನಿವಾರ 2,229 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದು ಒಟ್ಟು ಈವರೆಗೂ 37,292 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?