Connect with us

Featured

ರಾಮನಗದರಲ್ಲಿ ಕೊರೊನಾ ಆರ್ಭಟ : ಮಾಗಡಿಯಲ್ಲಿ 9, ರಾಮನಗರದಲ್ಲಿ 3 ಮಂದಿ ಸಾವು

ರೈಸಿಂಗ್ ಕನ್ನಡ :

ರಾಮನಗರ : 

ಜಿಲ್ಲೆಯಲ್ಲಿ ಚನ್ನಪಟ್ಟಣ 4, ಕನಕಪುರ 10 ಮತ್ತು ರಾಮನಗರ 27 ಪ್ರಕರಣಗಳು ಸೇರಿ ಇಂದು ಒಟ್ಟು 41 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.

 ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ 666 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 147,  ಕನಕಪುರ 134, ಮಾಗಡಿ 182 ಮತ್ತು ರಾಮನಗರ 203 ಪ್ರಕರಣಗಳು ಸೇರಿವೆ.

Advertisement

 ಗುಣಮುಖ : ಇಂದು ಜಿಲ್ಲೆಯಲ್ಲಿ 19 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 4, ಕನಕಪುರ 2, ಮಾಗಡಿ 4 ಮತ್ತು ರಾಮನಗರ 9 ಜನರು ಸೇರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 329 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 51, ಕನಕಪುರ 94, ಮಾಗಡಿ 98 ಮತ್ತು ರಾಮನಗರ 86 ಜನರು ಸೇರಿದ್ದಾರೆ.

 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ದಾಖಲಾಗಿರುವ 666 ಪ್ರಕರಣಗಳ ಪೈಕಿ 329 ಜನರು ಗುಣಮುಖರಾಗಿದ್ದಾರೆ, ಇನ್ನೂ 324 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 96, ಕನಕಪುರ 39, ಮಾಗಡಿ 75 ಮತ್ತು ರಾಮನಗರ 114 ಪ್ರಕರಣಗಳು ಸೇರಿವೆ.

 ಸಾವು : ಕನಕಪುರ ತಾಲ್ಲೂಕಿನಲ್ಲಿ ಒಬ್ಬರು, ಮಾಗಡಿ ತಾಲ್ಲೂಕಿನಲ್ಲಿ 9 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 3 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 13 ಮಂದಿ ನಿಧನರಾಗಿದ್ದಾರೆ.

 ಜಿಲ್ಲಾ ಆರೋಗ್ಯ ಇಲಾಖೆ ವರದಿ: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಶನಿವಾರ (ಜುಲೈ 25) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 14645 (ಹೊಸದಾಗಿ ಇಂದಿನ 180 ಸೇರಿ). ಒಟ್ಟು 6087 ಜನ 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 174 ಜನರು ಇಂದು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 4236ಗೆ ಏರಿಕೆಯಾಗಿದೆ.

 ಜ್ವರ ತಪಾಸಣೆ: ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 8 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 3923 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.

 ಕ್ವಾರಂಟೈನ್: ಒಟ್ಟು 9 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು 4 ಜನರು ಸೇರಿದ್ದಾರೆ. ಒಟ್ಟಾರೆ ಇನ್ಸ್ಟ್ಯೂಷನಲ್ ಕ್ವಾರೆಂಟೈನ್ ಸಂಖ್ಯೆ 158ಕ್ಕೆ ಏರಿಕೆಯಾಗಿದೆ.

Advertisement

 ಮಾದರಿ ಸಂಗ್ರಹ: ಇಂದು ಹೊಸದಾಗಿ 180 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 15200 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 13185 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 180 ಬಾಕಿ ವರದಿ ಸೇರಿ ಒಟ್ಟು 1088 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ