Featured
ಕಲಬುರಗಿಯಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ಮುಂದುವರಿಕೆ :ಕೋವಿಡ್ಗೆ ಮೂವರ ಬಲಿ

ರೈಸಿಂಗ್ ಕನ್ನಡ:
ಕಲಬುರಗಿ:
ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಲಾಕ್ಡೌನ್ ಅವಧಿಯನ್ನ ಇನ್ನು ಒಂದು ವಾರ ಕಾಲ ವಿಸ್ತರಿಸಿದ್ದಾರೆ.
ಕಲ್ಯಾಣ ಕರ್ನಾಟಕ ಕಲಬುರಗಿಯಲ್ಲಿ ದಿನ ದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಎಚ್ಚಾಗುತ್ತಿದೆ.ಭಾನುವಾರ ಜಿಲ್ಲೆಯಲ್ಲಿ 69 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,743 ಕ್ಕೆ ಏರಿಕೆಯಾಗಿದೆ, ಕೋವಿಡ್ ನಿಂದ ಇಂದು ಮತ್ತೆ ಮೂರು ಜನ ಸಾವನ್ನಪ್ಪಿದ್ದು, ಒಟ್ಟು ಜಿಲ್ಲೆಯಲ್ಲಿ ಸಾವನ್ನಪ್ಪಿರುವರ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯನ್ನ ಸಂಪೂರ್ಣ ಲಾಕ್ ಡೌನ್ ಮಾಡಿದರು ಮಹಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಬೆಳೆಯುತ್ತಲೆ ಇದೆ.ಕೊರೊನಾ ಮಾತ್ರ ನಿಯಂತ್ರಣಕ್ಕೆ ಬಾರದೆ ಇರೋದ ಕಲಬರಗಿ ಜಿಲ್ಲಾಡಳಿತಕ್ಕೆ ನುಂಗಲಾರದ ತುತ್ತಾಗಿದೆ.
ಜಿಲ್ಲಾಡಳಿತ ಎಷ್ಟೆಲ್ಲಾ ಕ್ರಮ ಕೈಗೊಂಡರೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲ್ಲೇ ಇದೆ. ಹೀಗಾಗಿ ಮತ್ತೆ ಒಂದು ವಾರ ಕಾಲ ಕಲಬುರಗಿ ಲಾಕ್ ಡೌನ್ ಗೆ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ 14 ರಿಂದ 20 ರ ವರೆಗೆ ಲಾಕ್ ಡೌನ್ ಘೋಷಿಸಲಾಗಿತ್ತು.
ಸೋಮವಾರಕ್ಕೆ ಲಾಕ್ ಡೌನ್ ಕೊನೆ ದಿನವಾಗಿದ್ದು, ಕೊರೊನಾ ಸೋಂಕು ಹರಡುವಿಕೆ ಮಾತ್ರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಕಲಬುರಗಿ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಮತ್ತೆ ಒಂದು ವಾರ ಕಾಲ ಮುಂದೂಡಿ ಕಲಬುರಗಿ ಡಿಸಿ ಬಿ.ಶರತ್ ಅದೇಶ ಹೊರಡಿಸಿದ್ದಾರೆ.
You may like
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?
ದಾವಣಗೆರೆ ಕೆಎಸ್ಆರ್ಟಿಸಿ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ವಿತರಣೆ