Featured
ಕೊಪ್ಪಳದಲ್ಲಿ ಲಾಕ್‌ಡೌನ್- ಕೊರೊನಾ ಓಡಿಸಲು ಶಾಸಕರ ಪ್ಲಾನ್..!
ರೈಸಿಂಗ್ ಕನ್ನಡ:
ನಾಗಾರಾಜ್. Y. ಕೊಪ್ಪಳ:
ಕೊಪ್ಪಳದಲ್ಲಿ ಹೆಚ್ಚಾಗುತ್ತಿರುವ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಯಂಪ್ರೇರಿತ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಶಾಸಕ ರಾಘವೇಂದ್ರ ಹಿಟ್ನಾಳ ನೇತೃತ್ವದಲ್ಲಿ ನಗರಸಭೆಯಲ್ಲಿ ವಿವಿಧ ವರ್ತಕರು, ನಗರಸಭೆ ಸದಸ್ಯರು ಗಣ್ಯರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜುಲೈ 8 ರಿಂದ 25ನೇ ತಾರೀಖಿನವರೆಗೆ ಮಧ್ಯಾಹ್ನ 2ರಿಂದ ಬೆಳಗಿನ 7 ಗಂಟೆವರೆಗೆ ಕೊಪ್ಪಳ ನಗರವನ್ನು ಸಂಪೂರ್ಣ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ತೀರ್ಮಾನ ತೆಗೆದುಕೊಳ್ಳಲಾಯಿತು.
ಎರಡು ಗಂಟೆಯ ನಂತರ ಸ್ವಯಂಪ್ರೇರಿತರಾಗಿ ವ್ಯಾಪಾರ ವಹಿವಾಟು ಬಂದ್ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲೂ ಕೊರೊನಾ ಹರಿಡುತ್ತಿರುವ ಹಿನ್ನಲೆಯಲ್ಲಿ 15 ದಿನಗಳ ಕಾಲ ಲಾಕ್ ಡೌನ್ಗೆ ಒಪ್ಪಿಗೆ ನೀಡಿದ್ದಾರೆ. ರೋಗ ಹರಡದಂತೆ ತಡೆಗಟ್ಟಲು ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಶಾಸಕ ರಾಘವೇಂದ್ರ ಹಿಟ್ನಾಳ ಮನವಿ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?