Featured
ಭಾನುವಾರದ ಕರ್ಫ್ಯೂಗೆ ರಾಯಚೂರು ರೆಡಿ : ರಾತ್ರಿಯಿಂದಲೇ 144 ಸೆಕ್ಷನ್ ಜಾರಿ
ರೈಸಿಂಗ್ ಕನ್ನಡ :
ರಾಯಚೂರು :
ಜಿಲ್ಲೆಯಲ್ಲಿ ಹೆಮ್ಮಾರಿ ಕರೋನಾ ಸೋಂಕು ಹೆಚ್ಚುತ್ತಿರುವುರಿಂದ ಸರರ್ಕಾರದ ಆದೇಶದಂತೆ ಭಾನುವಾರದಿಂದ ಲಾಕ್‌ಡೌನ್ ಆಗಲಿದ್ದು ರಾತ್ರಿಯಿಂದಲೇ ಜಿಲ್ಲೆಯಾದ್ಯಂತ 145 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ರಾಯಚೂರು ಎಸ್ಪಿ ಸಿ ಬಿ ವೇದಮೂರ್ತಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಹಬ್ಬುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಆತಂಕ ಮೂಡಿಸುತ್ತಿದ್ದು ಜಿಲ್ಲೆಯಲ್ಲಿಯೂ ಪ್ರತಿ ದಿನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜುಲೈ 5 ರಿಂದ ಆಗಸ್ಟ 2 ರವರೆಗೆ ಪ್ರತಿ ಭಾನುವಾರ ಅಗತ್ಯ ವಸ್ತುಗಳ ಪೂರೈಗೆ ಬಿಟ್ಟು ಉಳಿದೆಲ್ಲವನ್ನು ಸಂಪೂರ್ಣ ಲಾಕ್ ಮಾಡುವಂತೆ, ಜೊತೆಗೆ ಪ್ರತಿ ದಿನ ಬೆಳಿಗ್ಗೆ 8 ರಿಂದ ಸಂಜೆ 8 ಗಂಟೆವರೆಗೆ ಮಾತ್ರ ಯಥವತ್ತಾಗಿ ಅಂಗಡಿ ಮುಂಗಟ್ಟುಗಳನ್ನ ತೆರೆಯವಂತೆ ನಂತರ ರಾತ್ರಿ ಕಫ್ಯೂ೯ ಜಾರಿ ಮಾಡುವಂತೆ ಆದೇಶಿಸಿದೆ.
ಈ ಹಿನ್ನಲೆಯಲ್ಲಿ ಭಾನುವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಯಾಗುತ್ತಿದ್ದು ನಾಲ್ಕಕ್ಕಿಂತ ಹೆಚ್ಚು ಜನರು ತಿರುಗಾಡುವಂತಿಲ್ಲ. ಗುಂಪು ಗುಂಪಾಗಿ ಕಂಡು ಬಂದಲ್ಲಿ ಅಂತಹವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದಿದ್ದಾರೆ.
SP ರವರ ನೇತೃತ್ವದಲ್ಲಿ, 1 ASP, 4 Dysp , 10 CPI , 40 PSI, 500 ಪೊಲೀಸ್ ಕಾನಸ್ಟೆಬಲ್, 10 DAR, ಸೇರಿದಂತೆ ಗೃಹರಕ್ಷಕದಳ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿರಂತರವಾಗಿ ಗಸ್ತು ತಿರುಗುತ್ತಾರೆ. ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಿ ಬಿ ವೇದಮೂರ್ತಿ ಮನವಿ ಮಾಡಿದ್ದಾರೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್‌ಡೌನ್ ಫಿಕ್ಸಾ.?