Connect with us

Featured

ಕೊರೊನಾ ಪರೀಕ್ಷೆಗೆ ಅಂತಿಮ ಬಿಎಸ್​ಸಿ ವಿದ್ಯಾರ್ಥಿಗಳನ್ನ ಬಳಸಿಕೊಳ್ಳಿ: 24 ಗಂಟೆಯಲ್ಲಿ ವರದಿ ಕೊಡಲು ಡಿಸಿಎಂ ಅಶ್ವತ್ಥ ನಾರಾಯಣ ಸೂಚನೆ

ರೈಸಿಂಗ್ ಕನ್ನಡ:

ರಾಮನಗರ :

ಕೋವಿಡ್ 19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವ್ಯಬ್ ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ  ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ತಿಳಿಸಿದರು.

ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿರುವ 69 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್-19 ಪರೀಕ್ಷೆಯ  ಸ್ವ್ಯಬ್ ಸಂಗ್ರಹಣೆ ಕೇಂದ್ರಗಳನ್ನು ತೆರೆದು ತರಬೇತಿ ನೀಡಲಾಗುವ ವಿದ್ಯಾರ್ಥಿಗಳನ್ನು ನಿಯೋಜಿಸಿಕೊಳ್ಳಿ. ಜಿಲ್ಲೆಯಲ್ಲಿ ಕೋವಿಡ್-19 ಲಕ್ಷಣವುಳ್ಳ ರೋಗಿ ಪರೀಕ್ಷೆಗೆ ಒಳಪಡಬೇಕು ಎಂದರೆ ಯಾವುದೇ ಕಾರಣಕ್ಕೂ ಅವರು ಅದರಿಂದ ವಂಚಿತರಾಗಬಾರದು ಎಂದರು.

Advertisement

 24 ಗಂಟೆಯೊಳಗೆ ವರದಿ : ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಟ್ಟವರಿಗೆ 24 ಗಂಟೆಯೊಳಗೆ ಪರೀಕ್ಷೆಯ ವರದಿ ನೀಡಬೇಕು. ಪರೀಕ್ಷೆಯ ವರದಿ ಬ್ಯಾಕ್‌ಲಾಗ್ ಆಗದಂತೆ ನೋಡಿಕೊಳ್ಳಿ. ಕೋವಿಡ್-19 ಪರೀಕ್ಷೆ ರೋಗಿಗಳನ್ನು ಒಳಪಡಿಸುವಾಗ ಸರಿಯಾದ ವಿಳಾಸ ಪಡೆದುಕೊಳ್ಳಿ. ಇಲ್ಲಾವಾದಲ್ಲಿ ಪಾಸಿಟಿವ್ ಬಂದ ಸಂದರ್ಭದಲ್ಲಿ ಪತ್ತೆಹಚ್ಚುವುದು ಕಷ್ಟಕರವಾಗುತ್ತದೆ ಹಾಗೂ ರೋಗ ಕೂಡ ಹರಡುತ್ತದೆ. ಐ.ಎಲ್.ಐ ಮತ್ತು ಎಸ್.ಎ.ಆರ್.ಐ ಪ್ರಕರಣಗಳಲ್ಲಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು  ನಡೆಸಿ ಎಂದರು.

ಹೆಚ್ಚುವರಿ ಕಟ್ಟಡಕ್ಕೆ ಪ್ರಸ್ತಾವನೆ: ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡದ ಅವಶ್ಯಕತೆಯಿದ್ದಲ್ಲಿ ಸೂಕ್ತ ಪ್ರಸ್ತಾವನೆ ಸಲ್ಲಿಸಿ. ಮಂಡ್ಯ ಜಿಲ್ಲೆಯ ನಂತರ ಬೆಂಗಳೂರಿಗೆ ತಲುಪವವರೆಗೂ ಮೈಸೂರು -ಬೆಂಗಳೂರು  ಹೆದ್ದಾರಿಯಲ್ಲಿ ಯಾವುದೇ ಟ್ರಾಮಾ ಸೆಂಟರ್ ಇಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸೇರಿದಂತೆ ಆಸ್ಪತ್ರೆಗೆ ಬೇಕಿರುವ  ಸಿಬ್ಬಂದಿ, ಸಲಕರಣೆಗಳ ವಿವರದ ಮಾಹಿತಿಯನ್ನು ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

Puradamma
Puradamma

ಕೆರೆ ಒತ್ತುವರಿ ತೆರವುಗೊಳಿಸಿ: ಜಿಲ್ಲೆಯಲ್ಲಿರುವ ಕೆರೆಗಳ ಸರ್ವೆ ನಡೆಸಿ ಒತ್ತುವರಿಯನ್ನು ಶೀಘ್ರವಾಗಿ ತೆರವುಗೊಳಿಸಬೇಕು. ಗ್ರಾಮಗಳಲ್ಲಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಿಗರು ತಮ್ಮ ವ್ಯಾಪ್ತಿಗೆ ಬರುವ ಕೆರೆಗಳ ಬಗ್ಗೆ ನಿಗಾವಹಿಸಿ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು. ಒತ್ತುವರಿ ಪ್ರಕರಣಗಳಿದ್ದಲ್ಲಿ ನೋಟಿಸ್ ನೀಡಿ ತೆರವುಗೊಳಿಸಿ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.

ಸಿಎಸ್ಆರ್ ಅನುದಾನ: ರಾಮನಗರ ಜಿಲ್ಲೆಯಲ್ಲಿ ಬಹಳಷ್ಟು ಕೈಗಾರಿಕೆಗಳು ತಮ್ಮ ಸಿ.ಎಸ್.ಆರ್. ಅನುದಾನವನ್ನು ಬೇರೆ ಜಿಲ್ಲೆಗಳಿಗೆ ನೀಡಿ ಅಭಿವೃದ್ಧಿ ಕೆಲಸ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಸರಿಯಾದ ರೀತಿಯಲ್ಲಿ ಯೋಜನೆ ರೂಪಿಸಿ ಕೈಗಾರಿಕೆಗಳ ಸಿ.ಎಸ್.ಆರ್. ಅನುದಾನವನ್ನು ಪಡೆದುಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಿಕೊಳ್ಳಿ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಅವರು ಮಾತನಾಡಿ ಜಿಲ್ಲೆಯಲ್ಲಿ 1,273 ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದು, 566 ಮಂದಿ ಗುಣಮುಖರಾಗಿರುತ್ತಾರೆ. 690 ಸಕ್ರಿಯ ಪ್ರಕರಣಗಳಿದ್ದು, 17 ಜನ ಮೃಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ