Featured
ಅಪಘಾತದಲ್ಲಿ ಕೊರೊನಾ ವಾರಿಯರ್ ಸಾವು: ಖಾಸಗಿ ಆಸ್ಪತ್ರೆಯಲ್ಲಿ ನಿಧನ

ರೈಸಿಂಗ್ ಕನ್ನಡ :
ಬಾಗಲಕೋಟೆ:
ಕೋವಿಡ್ ಕರ್ತವ್ಯ ನಿರತ ಪೊಲೀಸ್ ಪೇದೆ ಅಪಘಾತದಲ್ಲಿ ಸಾವಗೀಡಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಯತ್ನಟ್ಟಿ ಗ್ರಾಮದ 33 ವರ್ಷದ ಸಂಗಪ್ಪ ಕರಿಯಪ್ಪ ಕರಿಗಾರ ಬೈಕ್ ಅಪಘಾತದಲ್ಲಿ ಸಾವಿಗೀಡಾದ ಕೊರೊನಾ ವಾರಿಯರ್.
ಮೃತ ಸಂಗಪ್ಪ ಮುಧೋಳ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜುಲೈ 28 ರಂದು ಮುಧೋಳ ನಗರದ ಕ್ವಾರಂಟೈನ್ ಕೇಂದ್ರದ ಭದ್ರತೆಗೆ ತೆರಳುವ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದಿದ್ದರು. ಅಪಘಾತದಲ್ಲಿ ಪೇದೆ ತಲೆಗೆ ಗಂಭೀರ ಗಾಯವಾಗಿತ್ತು. ಕಳೆದೆರಡು ದಿನಗಳಿಂದ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗಿನ 7 ಗಂಟೆಗೆ ಪೇದೆ ಮೃತಪಟ್ಟಿದ್ದಾರೆ.

ಮೃತ ಪೇದೆ ಗೌರವ ವಂದನೆ ಸಲ್ಲಿಸುವುದಾಗಿ ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಮಾಹಿತಿ ನೀಡಿದ್ದಾರೆ. ಮೃತ ಪೇದೆ ಪತ್ನಿ, 3 ವರ್ಷದ ಗಂಡು ಮಗು ಹಾಗೂ ಒಂದೂವರೆ ವರ್ಷದ ಹೆಣ್ಣು ಮಗುವನ್ನ ಅಗಲಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?