Featured
ಕೊರೊನಾ ಮಹಾ ಸ್ಪೋಟ: ದಾಖಲೆಯ 89,706 ಕೇಸ್: 1,115 ಸಾವು

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಕೊರೊನಾ ಮಹಾ ಸ್ಫೋಟ ಆಗುತ್ತಿದ್ದು ಮಂಗಳವಾರ ದೇಶಾದ್ಯಂತ ದಾಖಲೆಯ 89 ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 43 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ 89,706 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 43,70,129ಕ್ಕೆ ಏರಿದೆ.
ಜಾಹೀರಾತು
ಸಾವಿನ ಪ್ರಮಾಣದಲ್ಲೂ 1,115 ಮಂದಿ ಕೋವಿಡ್ 19ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 73,890ಕ್ಕೆ ಏರಿದೆ.
ಇದುವರೆಗೂ 33,98,845 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 8,97,394 ಸೋಂಕಿತರ ಚಿಕಿತ್ಸೆ ಪಡೆಯುತ್ತಿದ್ದಾರೆ.
8ನೇ ಸೆಪ್ಟೆಂಬರ್ವರೆಗೂ 5,18,04,677 ಸ್ಯಾಂಪಲ್ಗಳನ್ನ ಪರೀಕ್ಷೆ ಮಾಡಲಾಗಿದೆ. ಮಂಗಳವಾರ 11,54,549 ಸ್ಯಾಂಪಲ್ಗಳನ್ನ ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆರ್ಫ ಮೆಡಿಕಲ್ ರಿಸರ್ಚ್(ಐಸಿಎಂಆರ್) ಹೇಳಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?