Featured
ರಾಜ್ಯದಲ್ಲಿ 139 ಬಲಿ, 7,665 ಹೊಸ ಕೇಸ್, ದಾಖಲೆಯ 8,387 ಮಂದಿ ಡಿಸ್ಚಾರ್ಜ್

ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು ಮಂಗಳವಾರ ಹೆಮ್ಮಾರಿಗೆ 139 ಮಂದಿ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ139 ಮಂದಿ ಕ್ರೂರಿ ಹೊಡೆತಕ್ಕೆ ಸಾವನಪ್ಪಿದ್ದಾರೆ.ಇದರೊಂದಿಗೆ ರಾಜ್ಯದಲ್ಲಿ ಸಾವನಪ್ಪಿದವರ ಸಂಖ್ಯೆ 4,201ಕ್ಕೆ ಏರಿದೆ.
ಇನ್ನು ಸೋಂಕಿನಲ್ಲೂ ಕೊರೊನಾ ಆರ್ಭಟ ಮುಂದುವರೆದಿದೆ ಮಂಗಳವಾರ ದಾಖಲೆಯ 7,665 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸೋಂಕಿತರ ಸಂಖ್ಯೆ 2,40,948ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟು 79,782 ಸಕ್ರಿಯ ಪ್ರಕರಣಗಳಿವೆ.

ಸಮಾಧಾಕರ ವಿಷಯವೆಂದರೆ ಮಂಗಳವಾರ ದಾಖಲೆಯ 8,387 ಮಂದಿ ಬಿಡುಗಡೆಯಾಗಿದ್ದು, ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 1,56,949ಕ್ಕೆ ಏರಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು 2,242 ಮಂದಿಗೆ ಕೊರೊನಾ ಸೋಂಕು ತಗುಲಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,520ಕ್ಕೆ ಏರಿದೆ. 49 ಮಂದಿ ಕ್ರೂರಿಗೆ ಬಲಿಯಾಗಿದ್ದು ಬೆಂಗಳೂರಲ್ಲಿ ಕೋವಿಡ್ಗೆ ಬಲಿಯಾದವರ ಒಟ್ಟು ಸಂಖ್ಯೆ 1,532ಕ್ಕೆ ಏರಿದೆ. ನಗದರದಲ್ಲಿ ಒಟ್ಟು 33,081ಸಕ್ರಿಯ ಪ್ರಕರಣಗಳಿವೆ. ಮಂಗಳವಾರ 3520 ಮಂದಿ ಡಿಸ್ಚಾರ್ಜ್ ಆಗಿದ್ದು ರಾಜಧಾನಿಯಲ್ಲಿ ಒಟ್ಟು ಬಿಡುಗಡೆಯಾದವರ ಸಂಖ್ಯೆ 59,492ಕ್ಕೇ ಏರಿದೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















