Featured
ದಾವಣಗೆರೆಯಲ್ಲಿ ಅಕ್ರಮ ಜಾನುವಾರು ಸಾಗಾಟ: 12 ಮಂದಿ ಬಂಧನ : 77 ಜಾನುವಾರು ರಕ್ಷಣೆ
![](https://risingkannada.com/wp-content/uploads/2020/09/Davangere-cows.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಅಕ್ರಮವಾಗಿ ಜಾನುವಾರು ಸಾಗಾಣೆ ಮಾಡುತ್ತಿದ್ದ ಜಾಲ ಬೇಧಿಸುವಲ್ಲಿ ದಾವಣಗೆರೆ ಪೊಲೀಸರ ಯಶಸ್ವಿಯಾಗಿದ್ದಾರೆ.
ತಮಿಳುನಾಡು , ಕೇರಳಕ್ಕೆ ಅಕ್ರಮವಾಗಿ ಸಾಗಣೆಯಾಗುತ್ತಿದ್ದ 77 ಜಾನುವಾರುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
![](https://risingkannada.com/wp-content/uploads/2020/08/BIDAR-EDUCATION-1-1024x460.jpg)
ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಒಟ್ಟು 12 ಜನರ ಬಂಧಿಸಲಾಗಿದೆ. 77 ಜಾನುವಾರುಗಳಲ್ಲಿ 45 ಎಮ್ಮೆ 32 ಎತ್ತುಗಳನ್ನ ರಕ್ಷಿಸಲಾಗಿದೆ.
ರಾಣೇಬೆನ್ನೂರು ದಾವಣಗೆರೆ ವಿವಿಧ ಗ್ರಾಮಾಂತರ ಪ್ರದೇಶಗಳಿಂದ ವಾಹನಗಳಲ್ಲಿ ತುಂಬಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾವಣಗೆರೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದಾರೆ.
ಗ್ರಾಮಾಂತರ ಸರ್ಕಲ್ ಇನ್ಸಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜಾನುವಾರು ಕಳ್ಳ ಸಾಗಣೆ ಮಾಡುತ್ತಿದ್ದವರು ಬಲೆಗೆ ಬಿದಿದ್ದಾರೆ.
ನಾಲ್ಕು ಕಂಟೈನರ್ ಮೂಲಕ ಎಸ್ಕಾರ್ಟ್ ವಾಹನದಲ್ಲಿ ಜಾನುವಾರುಗಳನ್ನ ಸಾಗಿಸಲಾಗುತ್ತಿತ್ತು. ವಾಹನದಲ್ಲೇ ಮೂರು ಜಾನುವಾರು ಸಾವನ್ನಪ್ಪಿವೆ.ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಶಕ್ಕೆ ಪಡೆದ ಜಾನುವಾರು ಹೆಬ್ಬಾಳು ಬಳಿ ಗೋಶಾಲೆಯಲ್ಲಿ ಬಿಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?