Featured
ಟ್ರ್ಯಾಕ್ಟರ್ ಏರಿ, ಅನ್ನದಾತನಾದ ಡಿ-ಬಾಸ್ – ಫಾರ್ಮ್‌ಹೌಸ್‌ನಲ್ಲಿ ಶುರುವಾಯ್ತು ಕೃಷಿ ಚಟುವಟಿಕೆ..!
ರೈಸಿಂಗ್ ಕನ್ನಡ :
ಸಿನಿಮಾ ಡೆಸ್ಕ್ :
ಪ್ರಾಣಿ, ಪಕ್ಷಿಗಳು, ಕಾರ್‌ಗಳು, ಬೈಕ್‌ಗಳು ಅಂದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬಲು ಅಚ್ಚುಮೆಚ್ಚು ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ಆದ್ರೆ, ಒಬ್ಬ ರೈತನಾಗಿಯೂ ಡಿ ಬಾಸ್ ಖುಷಿ ಪಡ್ತಾರೆ. ಆಗಾಗ ಕೃಷಿ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುತ್ತಾರೆ. ಇದಕ್ಕೆ ಸಾಕ್ಷಿ ಅನ್ನುವಂತೆ, ದಚ್ಚು ತಮ್ಮದೇ ತೋಟದ ಮನೆಗಾಗಿ ಟ್ರ್ಯಾಕ್ಟರ್‌ವೊಂದನ್ನ ಖರೀದಿಸಿದ್ದಾರೆ.
ಮೈಸೂರಿನಲ್ಲಿರುವ ತಮ್ಮ ಫಾರ್ಮ್ ಹೌಸ್‍ನಲ್ಲಿ, ಪ್ರಾಣಿ-ಪಕ್ಷಿಗಳ ಜೊತೆಗೆ ಹೆಚ್ಚಾಗಿ ಸಮಯ ಕಳೆಯುತ್ತಿರುವ ದರ್ಶನ್ ಅವುಗಳಿಗೆ ಉಪಯೋಗವಾಗಲಿ ಎಂದು ಟ್ರ್ಯಾಕ್ಟರ್ ಖರೀದಿಸಿದ್ದಾರೆ. ಹೊಸ ಟ್ರ್ಯಾಕ್ಟರ್ ಖರೀದಿಸಿದ ನಂತರ ತಮ್ಮ ಸ್ನೇಹಿತರನ್ನು ಜೊತೆ ಕೂರಿಸಿಕೊಂಡು ಓಡಿಸಿದ್ದಾರೆ.
ದರ್ಶನ್ ಟ್ರ್ಯಾಕ್ಟರ್ ಓಡಿಸುತ್ತಿರುವ ವಿಡಿಯೋವನ್ನು ಅಭಿಮಾನಿಯೊಬ್ಬರು ರೆಕಾರ್ಡ್ ಮಾಡಿಕೊಂಡು ತನ್ನ ಫೇಸ್‍ಬುಕ್ ಪೇಜಿನಲ್ಲಿ ಅಪ್ಲೋಡ್ ಮಾಡಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟ ಟ್ರ್ಯಾಕ್ಟರ್ ಓಡಿಸುತ್ತಿರುವುದನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಸದ್ಯಕ್ಕೆ ಸಿನಿಮಾಗೆ ಸಂಬಂಧಿಸಿದ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಚಿತ್ರೀಕರಣ ಮುಗಿದು ಬಿಡುಗಡೆಗೆ ರೆಡಿಯಾಗಿದೆ. ಆದರೆ ಕೊರೊನಾದಿಂದ ಸದ್ಯಕ್ಕೆ ಸಿನಿಮಾ ಬಿಡುಗಡೆಯಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ದರ್ಶನ್ ಹೆಚ್ಚಿನ ಸಮಯವನ್ನ ಫಾರ್ಮ್‌ಹೌಸ್‌ನಲ್ಲೇ ಕಳೆಯುತ್ತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?