Featured
ರಾಶಿ ಭವಿಷ್ಯ ಬುಧವಾರ| ಆಗಸ್ಟ್ 12, 2020

ಫಲ 12/08/2020, ಬುಧವಾರ
ಮೇಷ:
ಪರಿವಾರದಲ್ಲಿ ಹೊಸಕಳೆ ಬರುವದು. ಕುಟುಂಬದಲ್ಲಿ ಸೌಖಯ ಇರುವದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು.
ವೃಷಭ:
ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ
ಮಿಥುನ:
ಮನೆಯಲ್ಲಿ ಅಸಮಾಧಾನ ಇರುವದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ.ವ್ಯಾಪಾರ ವೃದ್ಧಿಯಾಗುವದು
ಕಟಕ:
ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.
ಸಿಂಹ:
ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು.ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವದು. ಆರೋಗ್ಯದ ಮೇಲೆ ನಿಗಾ ಇರಲಿ.
ಕನ್ಯಾ :
ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು.
ತುಲಾ :
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವದು.
ವೃಶ್ಚಿಕ :
ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ.
ಧನಸ್ಸು:
ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವದು. ವ್ಯಾಪಾರ ಸಾಧಾರಣ.
ಮಕರ:
ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು
ಕುಂಭ:
ನಿಮ್ಮ ಶತ್ರುಗಳು ತಮ್ಮ ಕೃತ್ಯಗಳಿಂದ ತಾವಾಗಿಯೇ ಮಣಿಯುವರು. ಶತ್ರುದೋಷ ಪರಿಹಾರವಾಗುವುದು.ಚೋರ ಭಯ, ಅಗ್ನಿ ಭಯ ಮುಂತಾದ ಭಯ ನಿವಾರಣೆಯಾಗುವುದು. ಪುತ್ರಸೌಖ್ಯ, ಮನೆಯಲ್ಲಿ ಸಂತೋಷವಿರುವದು.
ಮೀನ:
ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು.
You may like

ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ

ಈ ರಾಶಿಯವರಿಗೆ ಸಂಜೆ ಮೇಲೆ ಕಾದಿದೆ ಕಂಟಕ!

ಈ ರಾಶಿಯವರಿಗೆ ಬಹಳ ದಿನಗಳ ಪ್ರಯತ್ನಕ್ಕೆ ಇಂದು ಫಲ ಸಿಗಲಿದೆ

ರವಿ ಗ್ರಹ ಪಿತೃಕಾರಕನಾದರೆ ಚಂದ್ರ ಗ್ರಹ ಮಾತೃಕಾರಕನಾಗಿರುವನು

ಪುರಾಣ ಎಂದರೇನು? ಎಷ್ಟು ಪುರಾಣಗಳಿವೆ ? ಯಾರು ರಚಿಸಿದ್ದಾರೆ?

ಗೃಹಸ್ಥ ಧರ್ಮ..! ಒಬ್ಬ ಗೃಹಸ್ಥನಾದವ ಮೂರು ರೀತಿಯಲ್ಲಿ ಇರಬೇಕಂತೆ…



















