ಸಿನಿಮಾ
ಶ್ರೀರಂಗ ಪಟ್ಟಣದಲ್ಲಿ ದರ್ಶನ್ ವಿವಾದಾತ್ಮಕ ಹೇಳಿಕೆ ಆರೋಪ
Cinema : ಚಾಲೆಂಜಿಂಗ್ ಸ್ಟಾರ್ ದರ್ಶನ್ ಸುತ್ತ ಸುತ್ತಿಕೊಂಡಿರೋ ವಿವಾದಗಳೇನು ಕಮ್ಮಿಯಿಲ್ಲ. ಇತ್ತೀಚೆಗೆ ನಿರ್ಮಾಪಕ ಉಮಾಪತಿ ಹಾಗೂ ದರ್ಶನ್ ನಡುವಿನ ‘ಕಾಟೇರ’ ಟೈಟಲ್ ವಿವಾದ ಬೇರೆ ಕಡೆಗೆ ತಿರುಗಿತ್ತು. ದರ್ಶನ್ ಚಿತ್ರರಂಗಕ್ಕೆ ಬಂದು 25 ವರ್ಷಗಳನ್ನು ಪೂರೈಸಿದ ಬೆನ್ನಲ್ಲೇ ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದರ್ಶನ್ ಕೊಟ್ಟ ಹೇಳಿಕೆ ವಿರುದ್ಧ ಮಹಿಳಾ ಸಂಘಟನೆಯೊಂದು ಆಕ್ರೋಶ ಹೊರಹಾಕಿತ್ತು.
ದರ್ಶನ್ ತಮ್ಮ 25ನೇ ವರ್ಷದ ಸಿನಿ ಜರ್ನಿ ಸಂಭ್ರಮದ ವೇಳೆ “ಇವತ್ತು ಇವಳು ಇರುತ್ತಾಳೆ.. ನಾಳೆ ಅವಳು ಇರುತ್ತಾಳೆ” ಅಂತ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆಯನ್ನು ಗೌಡತಿಯರ ಸೇನೆಯ ಮಹಿಳೆಯರು ಖಂಡಿಸಿದ್ದರು. ಅಷ್ಟೇ ಅಲ್ಲದೆ ಮಹಿಳಾ ಆಯೋಗಕ್ಕೆ ದರ್ಶನ್ ವಿರುದ್ಧ ದೂರನ್ನೂ ನೀಡಿದ್ದರು. ದರ್ಶನ್ ಕೊಟ್ಟ ಹೇಳಿಕೆಗಳಿಂದ ಮಹಿಳೆಯರಿಗೆ ಸಾರ್ವಜನಿಕವಾಗಿ ಅವಮಾನ ಆಗಿದೆ ಎಂದು ಆ ದೂರಿನಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಇಂದು (ಮಾರ್ಚ್ 1) ಕರ್ನಾಟಕ ರಾಜ್ಯ ಮಹಿಳಾ ಆಯೋಗ ದರ್ಶನ್‌ಗೆ ನೋಟಿಸ್ ನೀಡಿದೆ. ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ಆರೋಪ ಮಾಡಿ ದೂರು ನೀಡಿದ್ದರಿಂದ ದರ್ಶನ್‌ಗೆ ಈ ನೋಟಿಸ್ ಜಾರಿಯಾಗಿದೆ. ಈ ನೋಟಿಸ್ ತಲುಪಿದ ಒಂದು ವಾರದೊಳಗೆ ಆಯೋಗದ ಕಚೇರಿಗೆ ಬಂದು ವಿವರಣೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಚಾಲೆಂಜಿಂಗ್ ಸ್ಟಾರ್‌ಗೆ ನೋಟಿಸ್ ಕಳುಹಿಸಿದೆ
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?