Featured
ಮಾಜಿ ಶಾಸಕ ಕೆ.ಮಲ್ಲಪ್ಪ ನಿಧನ: ಅಹಿಂದಾ ಸಂಘಟನೆಯ ಪ್ರಮುಖ ರೂವಾರಿ
![](https://risingkannada.com/wp-content/uploads/2020/10/davangere-MLA.jpg)
ರೈಸಿಂಗ್ ಕನ್ನಡ :
ದಾವಣಗೆರೆ :
ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ನಿಧನರಾಗಿದ್ದಾರೆ.
ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಮಲ್ಲಪ್ಪ ಬೆಳಿಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆ ಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ದಾವಣಗೆರೆ ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಸಲ ಶಾಸಕ ಹಾಗೂ ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮಲ್ಲಪ್ಪ ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಮಲ್ಲಪ್ಪ ಅಹಿಂದಾ ಸಂಘಟನೆಯ ಪ್ರಮುಖ ರೂವಾರಿಯಾಗಿದ್ದರು.
ಮಾಜಿ ಶಾಸಕ ಕೆ ಮಲ್ಲಪ್ಪ ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನ ಅಗಲಿದ್ದಾರೆ.
You may like
ದಾವಣಗೆರೆಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ: ಅದೃಷ್ವವಶಾತ್ ಪ್ರಾಣಾಪಾಯದಿಂದ ಪಾರು
ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು
ಆಸ್ತಿ ವಿವಾದ: ಆರು ತಿಂಗಳಿನಿಂದ ದೇವಸ್ಥಾನಕ್ಕೆ ಹಾಕಿದ್ದ ಬೀಗ ತೆರೆವು
ದಾವಣಗೆರೆಯಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಿ ಕಿಸಾನ್ ದಿವಸ್ ಆಚರಣೆ
ಹರಿಹರ ವಿಧಾನ ಸಭಾ ಕ್ಷೇತ್ರದ ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ
ಕುರುಬ ಸಮುದಾಯ ಎಸ್ಟಿ ಸೇರ್ಪಡೆಗೆ ಆಗ್ರಹ: ಕಾಗಿನೆಲೆ ಶ್ರೀಗಳ ಪಾದಯಾತ್ರೆಗೆ ಸಿದ್ದತೆ