Featured
ರಾಮನಗರದಲ್ಲಿ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಅಶ್ವತ್ಥನಾರಾಯಾಣ: ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಆರು ತಿಂಗಳ ಗಡುವು
![](https://risingkannada.com/wp-content/uploads/2020/07/ramnagar-hospital-2707-2.jpg)
ರೈಸಿಂಗ್ ಕನ್ನಡ :
ರಾಮನಗರ:
ಜಿಲ್ಲಾ ಕೇಂದ್ರದಲ್ಲಿ 63 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸುಜ್ಜಿತ ಆಸ್ಪತ್ರೆಯ ಕಾಮಗಾರಿಯನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಪರಿಶೀಲನೆ ನಡೆಸಿದರು.
ಬೆಂಗಳೂರಿನಿಂದ ಬರುವಾಗಲೇ ತಮ್ಮ ಜತೆಯಲ್ಲಿ ಮಣಿಪಾಲ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಮುರಳಿ, ಡಾ. ಶ್ರೀರಾಮ ಅವರನ್ನು ಕರೆದುಕೊಂಡು ಬಂದಿದ್ದ ಅವರು, ಅವರೊಂದಿಗೆ ಇಡೀ ಆಸ್ಪ್ರತ್ರೆಯನ್ನು ಸುತ್ತುಹಾಕಿದರು ಹಾಗೂ 6 ತಿಂಗಳಲ್ಲಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮಣಿಪಾಲ್ ಆಸ್ಪತ್ರೆಯ ತಜ್ಞರು ಹೊಸ ಆಸ್ಪತ್ರೆಗಳನ್ನು ಸಿದ್ಧಪಡಿಸುವುದರಲ್ಲಿ ಪರಿಣಿತಿ ಹೊಂದಿದ್ದು, ಇಂತಹ ಆಸ್ಪತ್ರೆ ನಿರ್ಮಾಣಕ್ಕೆ ಅವರ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
![](https://risingkannada.com/wp-content/uploads/2020/07/Ramnagar-hospital-2707-1024x682.jpg)
ಜಾಗತಿಕ ಗುಣಮಟ್ಟದ ಎಲ್ಲ ಸೌಲಭ್ಯಗಳು ಈ ಆಸ್ಪತ್ರೆಯಲ್ಲಿ ಇರುತ್ತವೆ. ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಪರಿಕರಗಳನ್ನು ಅಳವಡಿಸಲಾಗುವುದು.
ಬೆಂಗಳೂರು- ಮೈಸೂರು ರಸ್ತೆಯ ಆಯಕಟ್ಟಿನಲ್ಲಿರುವ ಈ ಆಸ್ಪತ್ರೆಯನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ತಕ್ಕಂತೆ ರೂಪಿಸಲಾಗುವುದು. ಇದಕ್ಕೆ ಸಂಬಂಧಿಸಿ ತಜ್ಞ ವೈದ್ಯರ ಜತೆ ನಿರಂತರವಾಗಿ ಮಾತುಕತೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಜಿಲ್ಲಾಧಿಕಾರಿ ಅರ್ಚನಾ, ಸಿಇಒ ಇಕ್ರಂ, ಡಿಎಚ್ ಒ ಡಾ. ನಿರಂಜನ ಹಾಜರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?