ದೇಶ-ವಿದೇಶ
ದೆಹಲಿ ಮದ್ಯ ಹಗರಣ ಕೇಸ್; ಕೆಸಿಆರ್ ಪುತ್ರಿ ಕೆ.ಕವಿತಾ ಬಂಧನ

ದೆಹಲಿ: ಕೆಸಿಆರ್ ಪುತ್ರಿ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದೆ. ಸದ್ಯ ಕವಿತಾ ಅವರನ್ನು ದೆಹಲಿಗೆ ಅಧಿಕಾರಿಗಳು ಸ್ಥಳಾಂತರಿಸುತ್ತಿದ್ದಾರೆ.ಈ ಪ್ರಕರಣದಲ್ಲಿ ಕವಿತಾ ಅವರನ್ನು ಈ ಹಿಂದೆ ವಿಚಾರಣೆಗೊಳಪಡಿಸಿದ್ದರೂ, ಈ ವರ್ಷ ಅವರು ಎರಡು ಸಮನ್ಸ್‌ಗಳಿಗೆ ಹಾಜರಾಗಿರಲಿಲ್ಲ. ಹೀಗಾಗಿ, ಹೈದರಾಬಾದ್‌ನಲ್ಲಿರುವ ಕವಿತಾ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಸದ್ಯ ಬಂಧನ ಮಾಡಿ ದೆಹಲಿಗೆ ಕರೆದುಕೊಂಡು ಬರಲಾಗುತ್ತಿದೆ.
ದೆಹಲಿ ಮದ್ಯ ನೀತಿ ಹಗರಣದಲ್ಲಿ ಸೌತ್ ಗ್ರೂಪ್ ಪ್ರಮುಖ ಪಾತ್ರ ವಹಿಸಿತ್ತು. ಕೆ. ಕವಿತಾ ಇದರ ಭಾಗವಾಗಿದ್ದರು ಎಂಬ ಆರೋಪವಿತ್ತು. ಜತೆಗೆ ಹೈದರಾಬಾದ್ ಉದ್ಯಮಿ ಶರತ್ ರೆಡ್ಡಿ, ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸಲು ರೆಡ್ಡಿ ಮತ್ತು ಅವರ ಮಗ ರಾಘವ್ ಮಾಗುಂಟ ರೆಡ್ಡಿ ಕೂಡ ಸೌತ್ ಗ್ರೂಪ್ ಭಾಗವಾಗಿದ್ದರು ಎನ್ನಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?