Connect with us

Featured

ದೇವಗೌಡರು ನನಗೆ ತಂದೆಯ ಸಮಾನ – ಅವರ ಮಾತನ್ನ ಆಶೀರ್ವಾದ ಎಂದು ಭಾವಿಸುತ್ತೇನೆ ಎಂದ ಸಚಿವ ಡಾ. ನಾರಾಯಣ ಗೌಡ

ರೈಸಿಂಗ್ ಕನ್ನಡ :

ಮಂಡ್ಯ :

ದೇವೇಗೌಡರು ನನಗೆ ತಂದೆ ಸಮಾನ. ಅವರಿಂದಲೇ ರಾಜಕೀಯದಲ್ಲಿ ಬೆಳೆದವನು. ಅವರ ಮಾತನ್ನ ಆಶೀರ್ವಾದ ಎಂದು ಭಾವಿಸುತ್ತೇನೆ. ಆದರೆ ಕಲ್ಲುಗಣಿಗಾರಿಕೆ ವಿಚಾರದಲ್ಲಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು. ಅವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ತಕ್ಷಣ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಬಳಿಕ ದೇವೇಗೌಡರು ಸಮಯ ನೀಡಿದರೆ ಅವರು ಹೇಳಿದ ಸ್ಥಳಕ್ಕೇ ಹೋಗಿ ಮಾಹಿತಿ ಒದಗಿಸುತ್ತೇನೆ. ಆದ್ರೆ ಮಾಜಿ ಪ್ರಧಾನಿಯಾದ ಗೌಡರು ಪ್ರತಿಭಟನೆಗೆ ಮುಂದಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಮನವಿ ಮಾಡಿದ್ದಾರೆ.

ಮಂಡ್ಯ ಜಿಲ್ಲೆ ಕೆ.ಆರ್ ಪೇಟೆಗೆ ಭೇಟಿ ನೀಡಿದ ವಿವಿಧ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, ದೇವೇಗೌಡರು ಪ್ರತಿಭಟನೆ ಮಾಡಬಾರದು, ಸ್ವಲ್ಪ ಸಮಯಾವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಮಂಜು ಎನ್ನುವವರು ಎರಡು ಕ್ವಾರಿಗೆ ಪರವಾನಿಗೆ ಪಡೆದಿದ್ದರು. ಆದ್ರೆ 9 ಕೋಟಿ ರಾಯಲ್ಟಿ ಬಾಕಿ ಉಳಿಸಿಕೊಂಡಿದ್ದಾರೆ. ಜೊತೆಗೆ ಕ್ವಾರಿಯಿಂದ ಸಾಹುಕಾರ್ ಚನ್ನಯ್ಯ ನಾಲೆಗೆ ಧಕ್ಕೆಯಾಗಿತ್ತು. ವಾರಗಳ ಕಾಲ ನೀರು ನಿಲ್ಲಿಸಿ, ನಾಳೆ ದುರಸ್ಥಿ ಮಾಡಿಸಲಾಗಿತ್ತು. ಇದೆಲ್ಲವು ಕುಮಾರಸ್ವಾಮಿ ಅವರ ಸರಕಾರ ಇದ್ದಾಗಲೇ ಆಗಿತ್ತು. ಆ ಸಂದರ್ಭದಲ್ಲೇ ಕ್ವಾರಿಯನ್ನ ನಿಲ್ಲಿಸಲು ಆದೇಶ ಮಾಡಲಾಗಿತ್ತು. ಈ ಎಲ್ಲ ವಿಚಾರವನ್ನು ದೇವೇಗೌಡರ ಗಮನಕ್ಕೆ ತರಲಿಲ್ಲ. ಹಾಗಾಗಿ ದೇವೇಗೌಡರು ಆರೋಪ ಮಾಡಿದ್ದಾರೆ ಅಷ್ಟೆ. ಜಿಲ್ಲೆಯ ಎಲ್ಲ ಶಾಸಕರಿಗೂ ಈ ವಿಚಾರ ತಿಳಿದಿದೆ. ಪುಟ್ಟರಾಜು ಅವರು ಉಸ್ತುವಾರಿ ಸಚಿವರಾಗಿದ್ದರು. ಅವರಿಗೂ ಮಾಹಿತಿ ಇದೆ ಎಂದು ಸಚಿವರು ಸ್ಪಷ್ಟಪಿಡಿಸಿದ್ರು.

Advertisement

ಅಷ್ಟೇ ಅಲ್ಲದೇ ದೇವೇಗೌಡರ ಆರೋಪದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನು ಕರೆದು ಸಭೆ ಮಾಡುತ್ತಿದ್ದೇನೆ. ಸಂಪೂರ್ಣ ಮಾಹಿತಿ ಪಡೆದು ಮುಖ್ಯಮಂತ್ರಿಗಳಿಗೆ ನೀಡುತ್ತೇನೆ. ಗಣಿ ಇಲಾಖೆ ಸಚಿವರ ಗಮನಕ್ಕೂ ತರುತ್ತೇನೆ. ಬಳಿಕ ದೇವೇಗೌಡರಿಗೂ ಮಾಹಿತಿ ಒದಗಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ನಾನು ಶ್ರಮಿಸುತ್ತಿದ್ದೇನೆ. ದೇವೇಗೌಡರು ತುಂಬಾ ಹಿರಿಯರು. ನಾನು ಈಗಷ್ಟೆ ರಾಜಕೀಯದಲ್ಲಿ ಪುಟ್ಟ ಹೆಜ್ಜೆ ಇಡುತ್ತಿದ್ದೇನೆ. ಎಲ್ಲರ ಸಹಕಾರದಿಂದ ಅಭಿವೃದ್ಧಿ ಸಾಧ್ಯ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ