Connect with us

ಆರೋಗ್ಯ

ಆರೋಗ್ಯ ಸುಧಾರಣೆ ಮಾವಿನಕೆರೆ ರಂಗನಾಥನಿಗೆ ಹರಕೆ ತೀರಿಸಿದ ದೇವೇಗೌಡರು

ಹಾಸನ: ನನ್ನ ಆರೋಗ್ಯ ಗುಣಮುಖವಾದರೆ ನಿನ್ನ ಸಮ್ಮುಖದಲ್ಲಿ ೧೦೦೧ ಕಳಸ, ಪೂಜಾ ಕೈಂಕರ್ಯ ಮಾಡ್ತೀನಿ ಎಂದು ಮಾವಿನಕೆರೆ ರಂಗನಾಥಸ್ವಾಮಿಗೆ ಹರಕೆ ಕಟ್ಟಿಕೊಂಡಿದ್ದು, ಅದನ್ನಿಂದು ತೀರಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆರೋಗ್ಯ ಸರಿ ಇರಲಿಲ್ಲ. ಎರಡು ವರ್ಷ ಭಗವಂತನ ಅನುಗ್ರಹದಿಂದ ಬದುಕಿದ್ದೇನೆ. ನನ್ನ ಅಳಿಯ ಡಾ.ಮಂಜುನಾಥ್, ಮಣಿಪಾಲ್ ಆಸ್ಪತ್ರೆ ಮುಖ್ಯಸ್ಥರಾದ ಡಾ.ಸುದರ್ಶನ್ ಬಲ್ಲಾಳ್ ಮತ್ತು ಅವರ ತಂಡ ೨ ವರ್ಷದಿಂದ ನನ್ನನ್ನು ನೋಡಿಕೊಳ್ಳುತ್ತಿದ್ದಾರೆ. ನಿನ್ನೆ ಸಂಜೆ ೬ ಗಂಟೆಯಿಂದ ರಂಗನಾಥನ ಸಾನಿಧ್ಯದಲ್ಲಿ ವಿಧಿವತ್ತಾಗಿ, ಶಾಸ್ತ್ರೋಕ್ತವಾಗಿ, ನಮ್ಮ ಸಂಪ್ರದಾಯದಂತೆ ಪೂಜಾ ಕಾರ್ಯ ಮಾಡುತ್ತಿದ್ದೇವೆ ಎಂದರು. ತುಂಬಾ ಜನ ಪುರೋಹಿತರಿದ್ದಾರೆ, ಹೊರಗಡೆಯಿಂದಲೂ ಬಂದಿದ್ದಾರೆ. ನಾಳೆ ೪ ಗಂಟೆಗೆ ಪೂಜೆ ಮುಗಿಯಬಹುದು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿದರು. ಯಾರೂ ರಾಜಕೀಯ ಬೆರಸಬಾರದು ಎಂದು ವಿನಂತಿಸಿದರು. ನಾನು, ನನ್ನ ಶ್ರೀಮತಿ, ಸೊಸೆ ಭವಾನಿ, ಪುತ್ರ ರೇವಣ್ಣ ಇದ್ದಾರೆ. ನಾವು ದೇವರನ್ನು ನಂಬಿದ್ದೇವೆ. ನಮ್ಮ ತಂದೆ ಇಲ್ಲಿನ ಹಳೆಯ ದಾರಿಯಲ್ಲಿ ನನ್ನನ್ನು ಕರೆದುಕೊಂಡು ಬರ್ತಿದ್ದರು ಎಂದು ನೆನಪು ಮಾಡಿಕೊಂಡರು.

ಮೂರ‍್ನಾಲ್ಕು, ಐದು ಶ್ರಾವಣ ಶನಿವಾರ ಬರುತ್ತೆ. ಈ ಪೂಜಾ ಕಾರ್ಯಕ್ರಮದ ವ್ಯವಸ್ಥೆಯನ್ನು ನಾನು, ರೇವಣ್ಣ ಮಾಡಿದ್ರೆ ಅಪಾರ್ಥ ಕಲ್ಪಿಸುತ್ತಾರೆ. ಅದಕ್ಕೇ ನನ್ನ ಮಿತ್ರರಿಗೆ ಹೇಳಿದ್ದೆ. ಅವರೇ ಖದ್ದು ನಿಂತು ಎಲ್ಲಾ ಮಾಡಿದ್ದಾರೆ ಎಂದ ಗೌಡರು, ಬಂದ ಎಲ್ಲರಿಗೂ ಸಮರ್ಪಕವಾಗಿ ಪ್ರಸಾದ ವಿತರಿಸಿದ್ದಾರೆ ಎಂದು ಹೇಳಿದರು. ರಂಗನಾಥನ ಆಶೀರ್ವಾದಿಂದ ರಾಜಕೀಯದಲ್ಲಿ ನಾನು ಬೆಳೆದಿದ್ದೇನೆ. ನನಗೆ ೮ ವರ್ಷವಿದ್ದಾಗ (೮೦ ವರ್ಷಗಳ ಹಿಂದೆ) ಈ ಕಾರ್ಯಕ್ರಮ ನಡೆದಿತ್ತು. ನಾಳೆ ಬಹಳ ಭಕ್ತಾಧಿಗಳು ಬರ್ತಾರೆ. ಅಂತಿಮವಾಗಿ ಕಳಸ ಪ್ರತಿಷ್ಠಾಪನೆ ಮಾಡ್ತಾರೆ. ಈ ಅವಕಾಶ ಮಾಡಿಕೊಟ್ಟ ದೇವರಿಗೆ ನಾನು ತುಂಬಾ ಅಬಾರಿಯಾಗಿದ್ದೇನೆ ಎಂದು ನುಡಿದರು.

ನನಗೆ ಕಿಡ್ನಿ ಫೇಲಾಗಿ ತೊಂದರೆ ಆಯ್ತು, ಈಗ ಎಲ್ಲಾ ಸರಿ ಹೋಗಿದೆ. ನಾನು ಆರೋಗ್ಯವಾಗಿರಲು ಡಾಕ್ಟರ್‌ಗಳ ಪ್ರಾಮಾಣಿಕ ಪ್ರಯತ್ನ ಕಾರಣ. ಭಗವಂತನ ಅನುಗ್ರಹ, ನನ್ನ ಅಳಿಯ, ಸುದರ್ಶನ್ ಬಲ್ಲಾಳ್ ಅಂಡ್ ಅವರ ತಂಡದ ಪ್ರಯತ್ನದ ಫಲವಾಗಿ ಸುಧಾರಿಸಿದ್ದೇನೆ ಎಂದು ಹೇಳಿದರು.

ವಯಸ್ಸಿನ ಕಾರಣದಿಂದ ನನಗೆ ಮಂಡಿ ನೋವಿದೆ. ಆದರೆ ಜ್ಞಾಪಕಶಕ್ತಿ ಇದೆ. ಹಿಂದೆ ಕಾಂಗ್ರೆಸ್‌ನಿಂದ ಟಿಕೆಟ್ ತಪ್ಪಿತು, ೧೦ ರೂ. ಬಾಡಿಗೆ ಮನೆಯಲ್ಲಿದ್ದೆ, ಆಗ ನನ್ನ ಹೆಂಡ್ತಿ ಹೇಳಿದ್ರು. ಆ ರಂಗನಾಥ ಇದ್ದಾನೆ ಚುನಾವಣೆಗೆ ನಿಂತುಕೊಳ್ಳಿ ಅಂತ, ಜನರೇ ದುಡ್ಡು ಹಾಕಿ ಚುನಾವಣೆ ಮಾಡಿದ್ರು ಗೆದ್ದೆ ಎಂದು ನೆನಪು ಮಾಡಿಕೊಂಡರು. ಅಲ್ಲಿಂದ ಪ್ರಧಾನಮಂತ್ರಿ ಆದೆ ಎಂದು ರಾಜಕೀಯ ಪಯಣ ವಿವರಿಸಿದರು. ನಾನು ರಾಜಕಾರಣ ಆರಂಭಿಸುವಾಗಲೂ ರಂಗನಾಥನ ಆಶೀರ್ವಾದ ಪಡೆದಿದ್ದೇನೆ. ನನಗೆ ೩ ವರ್ಷ ಇದ್ದಾಗಿ ನಿಂದಲೂ ಈ ದೇವರ ಆಶೀರ್ವಾದ ಪಡೆದಿದ್ದೇನೆ. ಆ ಭಗವಂತನ ಅನುಗ್ರಹದಿಂದ ಬದುಕಿದ್ದೇನೆ ಎಂದು ಹೇಳಿದರು.

ಕ್ರೀಡೆ6 days ago

ನೀವು ಐಪಿಎಲ್ ಅನ್ನು ನಿಯಮಿತವಾಗಿ ನೋಡಬೇಕು. ಹಾಗಾದರೆ ಐಪಿಎಲ್ ಟ್ರೋಫಿಯಲ್ಲಿ ಏನು ಬರೆದಿದೆ ಎಂದು ಹೇಳಬಹುದಾ?

ಆರೋಗ್ಯ6 days ago

ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರೆ ಈ 5 ಆಹಾರಗಳಿಂದ ದೂರವಿರಿ

ಕ್ರೀಡೆ1 week ago

ರಾಹುಲ್ ಬೆನ್ನಿಗೆ ನಿಂತ ಮಾಜಿ ಕೋಚ್

ಸಿನಿಮಾ1 week ago

ಕಾಂತಾರ 1 OTT ರೈಟ್ಸ್​ಗೆ ಭರ್ಜರಿ ಪೇಮೆಂಟ್! ಎಷ್ಟು ಕೋಟಿ ಗೊತ್ತಾ?

ಆರೋಗ್ಯ1 week ago

ಒಗ್ಗರಣೆಗೆ ಬಳಸೋ ಸಾಸಿವೆಯಲ್ಲಿದೆ ಅದ್ಭುತ ಆರೋಗ್ಯ ಪ್ರಯೋಜನ; ತಿಳಿದ್ರೆ ಶಾಕ್​ ಆಗ್ತೀರಿ!

ಕ್ರೀಡೆ2 weeks ago

ಆರ್ ಸಿ ಬಿ ಭರ್ಜರಿ ಗೆಲವು, ದಾಖಲೆಗಳ ಸುರಿಮಳೆ..!

ರಾಜ್ಯ2 weeks ago

ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ..!

ಟಾಪ್ ನ್ಯೂಸ್2 weeks ago

HD Revanna | ರೇವಣ್ಣ ಅರೆಸ್ಟ್ ಬೆನ್ನಲ್ಲೇ ಹೆಂಡತಿಯಾದ ಭವಾನಿ ರೇವಣ್ಣಗೂ ಸಂಕಷ್ಟ..!

ಟಾಪ್ ನ್ಯೂಸ್2 weeks ago

ರೇವಣ್ಣ ಅರೆಸ್ಟ್ ಬೆನ್ನಲ್ಲೇ ಭವಾನಿ ರೇವಣ್ಣಗೂ ಸಂಕಷ್ಟ!

ಟಾಪ್ ನ್ಯೂಸ್2 weeks ago

ರೇವಣ್ಣ ಬಂಧನ ಬೆನ್ನಲ್ಲೇ SIT ಸಂಪರ್ಕಕ್ಕೆ ಬಂದ ಮೂವರು ಸಂತ್ರಸ್ತೆಯರು..!

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured11 months ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured11 months ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

ಆರೋಗ್ಯ2 years ago

ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್​ಡೌನ್​ ಫಿಕ್ಸಾ.?