Featured
ಆಸ್ಪತ್ರೆಯಿಂದ ಡಿಕೆಶಿ ಡಿಸ್ಚಾರ್ಜ್ : ನಿಮ್ಮೆಲರ ಆಶೀರ್ವಾದದಿಂದ ಚೆನ್ನಾಗಿದ್ದೇನೆ ಎಂದ ಡಿಕೆ

ಬೆಂಗಳೂರು : ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಭಾನುವಾರ ಬೆಳಗ್ಗೆ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಡಿಕೆಶಿ ಶುಕ್ರವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಬಳಿಕ ಸ್ವಲ್ಪ ಗುಣಮುಖರಾಗಿರೋ ಡಿಕೆಶಿ, ಇವತ್ತು ಡಿಸ್ಚಾರ್ಜ್ ಆದ್ರು.
ಈ ವೇಳೆ, ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ ಡಿಕೆಶಿ, ನಿಮ್ಮೆಲ್ಲರ ಆಶಿರ್ವಾದದಿಂದ ಚೆನ್ನಾಗಿದ್ದೇನೆ. ನನಗೆ ಎರಡು ವಾರ ರೆಸ್ಟ್ ಬೇಕಿದೆ ಎಂದು ವೈದ್ಯರು ಹೇಳಿದ್ದಾರೆಂದು ಎಲ್ಲರಿಗೂ ಕೈ ಮುಗಿದು ಡಿಕೆ ಶಿವಕುಮಾರ್ ಮನೆಗೆ ಹೊರಟ್ರು.
ಇನ್ನು, ಇಡಿ ಎದುರು ತಮ್ಮ ತಾಯಿ ವಿಚಾರಣೆಗೆ ಹಾಜರಾಗಬೇಕಿದೆ. ಈ ಸಂಬಂಧ ಈಗಾಗಲೆ ಡಿಕೆ ಕೋರ್ಟ್ನಲ್ಲಿ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಡಿಕೆಶಿ, ಕೋರ್ಟ್ ಗೆ ಹೋಗಬೇಕಿದೆ. ಈ ಕಾರಣಕ್ಕಾಗಿಯೇ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸೋಂಕು ಇಲ್ಲ ಎಂದು ಸ್ಪಷ್ಟ ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಮಾಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?