ರೈಸಿಂಗ್ ಕನ್ನಡ :
ಬೆಂಗಳೂರು :
ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಪ್ರತಿಜ್ಞಾಗೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರೇ ಅನುಮತಿ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಡಿ,ಕೆ ಶಿವಕುಮಾರ್ ಪಾಸ್ ಇಲ್ಲದವರೂ ಅನಾವಶ್ಯಕವಾಗಿ ಬೆಂಗಳೂರಿಗೆ ಬಂದು ಗೊಂದಲ ಅನುಭವಿಸೋದು ಬೇಡ ಎಂದಿದ್ದಾರೆ. ನನ್ನ ಮನೆಯಿಂದಲೇ ಕೇವಲ ಇಬ್ಬರು ಬರುತ್ತಿದ್ದು, ಟಿವಿ ಹಾಗೂ ಜೂಮ್ ಆ್ಯಪ್ ಮೂಲಕ ಕಾರ್ಯಕ್ರಮ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ.
ಪ್ರತಿಜ್ಞಾ ಕಾರ್ಯಕ್ರಮಕ್ಕೆ ಕೆಲವು ಕಡೆಗಳಲ್ಲಿ ಪೊಲೀಸರು ತೊಂದರೆ ನೀಡುತ್ತಿದ್ದಾರೆ ಎಂಬ ಕರೆಗಳು ಬಂದಿವೆ. ಯಡಿಯೂರಪ್ಪನವರೇ ಕಾರ್ಯಕ್ರಮ ಮಾಡಿಕೊಳ್ಳಿ ಎಂದು ಅನುಮತಿ ಕೊಟ್ಟಿದ್ದಾರೆ ನಾನು ಈ ಸಂಬಂಧ ಗೃಹ ಮಂತ್ರಿಗಳು, ಪೊಲೀಸ್ ಮಹಾ ನಿರ್ದೇಶಕರ ಜೊತೆ ಮಾತನಾಡಿದ್ದೇನೆ, ಯಾರೂ ಧೃತಿಗೆಡುವ ಅಗತ್ಯವಿಲ್ಲ ಎಂದಿದ್ದಾರೆ.
ಎಲ್ಲ ಮಠ ಹಾಗೂ ಸಮುದಾಯದ ಗುರು ಹಿರಿಯರು ಆಶೀರ್ವಾದ ಮಾಡಬೇಕು ಎಂದು ಈ ಮೂಲಕ ಕೇಳಿಕೊಳ್ಳುತ್ತಿದ್ದೇನೆ. ಜನರು ಕೂಡ ನಾವು ನೀಡಿರುವ ಸಂಖ್ಯೆಗೆ ಮಿಸ್ ಕಾಲ್ ನೀಡಿ ಆ ಮೂಲಕ ಆಶೀರ್ವಾದ ನೀಡಬಹುದು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ,ಕೆ ಶಿವಕುಮಾರ್ ತಿಳಿಸಿದ್ದಾರೆ.
ನಾವು ಇಲ್ಲಿಗೆ ಬರುವವರಿಗೆ ಮಾತ್ರ ಪಾಸ್ ನೀಡಿದ್ದು, ಕೆಲವು ನಾಯಕರು, ಹೊರ ರಾಜ್ಯದಿಂದ ನಾಲ್ಕೈದು ಜನ ಹಾಗೂ ಮಾಧ್ಯಮದವರಿಗೆ ಮಾತ್ರ ಈ ಪಾಸ್ ನೀಡಲಾಗಿದೆ. ಅವರು ಮಾತ್ರ ಇಲ್ಲಿಗೆ ಬರಲು ಅವಕಾಶವಿದೆ. ಹೀಗಾಗಿ ಹೆಚ್ಚಿನ ಜನ ಸೇರುವುದಿಲ್ಲ ಎಂದು ತಿಳಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?