Connect with us

ರಾಜ್ಯ

ಡೆಬಿಟ್ ಕಾರ್ಡ್ ಕಳೆದು ಹೋದ್ರೆ ಏನ್ಮಾಡ್ಬೇಕು ಗೊತ್ತಾ?

Money : ಡೆಬಿಟ್ ಕಾರ್ಡ್​ಗಳು ಜನ ಸಾಮಾನ್ಯರ ವ್ಯವಹಾರವನ್ನು ಸುಲಭವಾಗಿಸಿದೆ. ನಗದು ವಿತ್ಡ್ರಾ ಮಾಡುವುದು ಮಾತ್ರವಲ್ಲ ಕಾರ್ಡ್ ಸ್ವೈಪ್ ಮಾಡಿ ಖರೀದಿಯನ್ನೂ ಮಾಡಬಹುದು. ಹೀಗಾಗಿ ನಗದು ರಹಿತ ವ್ಯವಹಾರಗಳಿಗಾಗಿ ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ಗಳು ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗುತ್ತಿದೆ. ಅನಧಿಕೃತ ವಹಿವಾಟುಗಳಿಂದ ರಕ್ಷಿಸಲು ಪಿನ್ ಆಧಾರಿತ ದೃಢೀಕರಣವನ್ನು ಒದಗಿಸಲಾಗಿದೆ.

ಆದಾಗ್ಯೂ ಕೆಲವೊಮ್ಮೆ ಡೆಬಿಟ್ ಕಾರ್ಡ್ ಕಳೆದುಹೋಗುವ ಅಥವಾ ಕಳವಾದಾಗ ದುರುಪಯೋಗವಾಗುವ ಸಾಧ್ಯತೆ ಇದೆ. ನಿಮ್ಮ ಡೆಬಿಟ್ ಕಾರ್ಡ್ ವಂಚಕರ ಕೈಗೆ ಸಿಕ್ಕರೆ ಅಪಾಯ. ಹೀಗಾದಾಗ ನಿಮ್ಮ ಅಕೌಂಟ್ನ ಹಣ ಖಾಲಿ ಆದಂತೆಯೇ ಲೆಕ್ಕ. ಹಾಗಂತ ನಿಮ್ಮ ಡೆಬಿಟ್ ಕಾರ್ಡ್ ಕಳೆದು ಹೋದರೆ ಚಿಂತೆ ಬೇಡ. ತ್ವರಿತವಾಗಿ ಕಾರ್ಯ ಪ್ರವೃತ್ತರಾಗುವ ಮೂಲಕ ನಿಮ್ಮ ಕಾರ್ಡ್ ಅನ್ನು ನಿಷ್ಕ್ರೀಯಗೊಳಿಸಿ (ಬ್ಲಾಕ್) ಹಣವನ್ನು ಸುರಕ್ಷಿತವಾಗಿಟ್ಟುಕೊಳ್ಳಬಹುದು.

ಕಸ್ಟಮರ್ ಕೇರ್ಗೆ ಕರೆ ಮಾಡಿ : ನಿಮ್ಮ ಎಟಿಎಂ ಕಾರ್ಡ್ ಗಮನಿಸಿ. ಇದರ ಹಿಂಭಾಗದಲ್ಲಿ ಕಸ್ಟಮರ್ ಕೇರ್ ನಂಬರ್ ನಮೂದಾಗಿರುತ್ತದೆ. ಈ ಸಂಖ್ಯೆಯನ್ನು ಕೂಡಲೇ ಮೊಬೈಲ್ ಫೋನ್ನಲ್ಲಿ ಸೇವ್ ಮಾಡಿಟ್ಟುಕೊಳ್ಳಿ. ನಿಮ್ಮ ಡೆಬಿಟ್ ಕಾರ್ಡ್ ಕಳೆದು ಹೋದರೆ ಈ ಸಂಖ್ಯೆಗೆ ಕರೆ ಮಾಡಿ ಬ್ಲಾಕ್ ಮಾಡಲು ಮನವಿ ಸಲ್ಲಿಸಿ. ಜತೆಗೆ ಎಟಿಎಂ ಕಾರ್ಡ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಕೂಡ ತಕ್ಷಣ ನಿಮಗೆ ಲಭ್ಯವಾಗುವಂತೆ ಸೇವ್ ಮಾಡಿಟ್ಟುಕೊಳ್ಳಿ. ಗಮನಿಸಿ ಇದು ಬೇರೆಯವರಿಗೆ ಸಿಗದಂತಿರಲಿ.

ನೆಟ್ ಬ್ಯಾಂಕಿಂಗ್ : ಇದು ಇನ್ನೊಂದು ಸರಳ ವಿಧಾನವಾಗಿದ್ದು, ನೆಟ್ ಬ್ಯಾಂಕಿಂಗ್ ಮೂಲಕ ನಿಮ್ಮ ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ ಅನ್ನು ಕೂಡಲೇ ಬ್ಲಾಕ್ ಮಾಡಬಹುದು. ಅದಕ್ಕಾಗಿ ನೀವು ಮೊದಲು ನೆಟ್ ಬ್ಯಾಂಕಿಂಗ್ ಖಾತೆಗೆ ಲಾಗ್ ಇನ್ ಆಗಿ. ನಂತರ ಅಲ್ಲಿ ತಿಳಿಸಿರುವ ಮಾಹಿತಿಯನ್ನು ನಮೂದಿಸಿ. ಎಲ್ಲ ಮಾಹಿತಿಯನ್ನು ಸಮರ್ಪಕವಾಗಿ ನೀಡಿದ ಬಳಿಕ ಕಾರ್ಡ್ ಬ್ಲಾಕ್ ಆಗುತ್ತದೆ.

ಬ್ಯಾಂಕ್ ಶಾಖೆಗೆ ಭೇಟಿ ನೀಡಿ : ಸಮೀಪದಲ್ಲೇ ನಿಮ್ಮ ಬ್ಯಾಂಕ್ನ ಶಾಖೆ ಇದ್ದರೆ ಕೂಡಲೇ ಅಲ್ಲಿಗೆ ತೆರಳಿ. ಡೆಬಿಟ್ ಕಾರ್ಡ್ ಬ್ಲಾಕ್ ಮಾಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ. ಗಮನಿಸಿ, ಈ ವೇಳೆ ನೀವು ಸಮರ್ಪಕ ಮಾಹಿತಿಯನ್ನು ನಮೂದಿಸಬೇಕಾಗುತ್ತದೆ. ಹೀಗಾಗಿ ಅಗತ್ಯ ದಾಖಲೆಗಳು ನಿಮ್ಮ ಬಳಿ ಇರಲಿ.

Advertisement

ಆನ್ಲೈನ್ ಮೂಲಕ ಬ್ಲಾಕ್ ಮಾಡಿ : ಬಹುತೇಕ ಬ್ಯಾಂಕ್ಗಳು ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಷನ್ ಹೊಂದಿವೆ. ಇದರ ಮೂಲಕ ಗ್ರಾಹಕರು ತಮ್ಮ ಎಟಿಎಂ ಕಾರ್ಡ್ ಬ್ಲಾಕ್ ಮಾಡಬಹುದು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ