Connect with us

Featured

ಮತ್ತೆ ಶುರು ಡಾ.ರಾಜ್ ಕಪ್ – ದುಬೈನಲ್ಲಿ ರಾಜ್ ಕಪ್ ಸೀಸನ್-6

ಬೆಂಗಳೂರು – ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ ಶುರುವಾಗ್ತಿದೆ. ಸಿಸಿಎಲ್ ಕ್ರಿಕೆಟ್ ಲೀಗ್ ಬೆನ್ನಲ್ಲೀಗ ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದ್ದು, ಇದೇ ಜೂನ್ 17 ರಂದು ದುಬೈನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಆಯೋಜರಾದ ರಾಜೇಶ್ ಬ್ರಹ್ಮಾವರ, ಅನಿರುದ್, ಮಣಿಕಾಂತ್ ಕದ್ರಿ, ಸಿಂಪಲ್ ಸುನಿ, ರವಿಶಂಕರ್ ಗೌಡ, ಜೇಮ್ಸ್ ಚೇತನ್, ಪವನ್ ಒಡೆಯರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.

ರಾಜ್ ಕಪ್ ಆಯೋಜಕರಾದ ರಾಜೇಶ್ ಬ್ರಹ್ಮಾವರ ಮಾತನಾಡಿ, ಇದೇ 17ಕ್ಕೆ ದುಬೈನಲ್ಲಿ ರಾಜ್ ಕಪ್ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಕಳೆದ ಬಾರಿ 8 ತಂಡ ಇತ್ತು. ಈ ಬಾರಿ 12 ತಂಡಗಳಾಗಿವೆ. 1000ಕ್ಕೂ ಹೆಚ್ಚು ಅಪ್ಲೀಕೇಷನ್ ಬಂದಿತ್ತು. ಅವುಗಳಲ್ಲಿ ರೂಲ್ಸ್ ಗೆ ತಕ್ಕಂತೆ ಆಯ್ಕೆ ಮಾಡಲಾಗಿದೆ. 12 ತಂಡಗಳಿಗೆ 12 ಕ್ಯಾಪ್ಟನ್, 12 ವೈಸ್ ಕ್ಯಾಪ್ಟನ್, ಸ್ಟಾರ್ ಕ್ಯಾಪ್ಟನ್ ಇರಲಿದ್ದಾರೆ. ರಾಜ್ ಕಪ್ ಸೀಸನ್ 6ನ್ನು ಆರು ದೇಶಗಳಲ್ಲಿ ಮಾಡುವ ಪ್ಲಾನ್ ನಡೆದಿದೆ. ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ, ಬ್ಯಾಂಕಾಕ್ ಮತ್ತು ದುಬೈನಲ್ಲಿ ಪಂದ್ಯ ನಡೆಯಲಿವೆ. ಇನ್ನೊಂದು ದೇಶ ಬಾಕಿ ಉಳಿದಿದೆ. ದುಬೈನಲ್ಲಿ ನಡೆಯುವ ಆಟಗಾರರ ಹರಾಜಿನಲ್ಲಿ ಮುಖ್ಯ ಅತಿಥಿಯಾಗಿ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ನಟ ಅನಿರುದ್ಧ್ ಮಾತನಾಡಿ, ಡಾ.ರಾಜ್ ಕಪ್ ಹೆಸರಲ್ಲೇ ಸಕಾರಾತ್ಮಕತೆ ಇದೆ. ಆ ಒಂದು ವ್ಯಕ್ತಿಗೆ ಮಹಾನ್ ಕಲಾವಿದರಿಗೆ ಅವ್ರ ಹೆಸರಲ್ಲಿ ಅವರ ಸ್ಮಾರಣಾರ್ಥವಾಗಿ ಕ್ರಿಕೆಟ್ ಪಂದ್ಯಾವಳಿ ಆಡುತ್ತಿರುವುದು ನಿಜಕ್ಕೂ ಸಂತೋಷ. ಅದರಲ್ಲಿ ನಾನು ಭಾಗಿಯಾಗಿದ್ದು, ರಾಜೇಶ್ ಅವಕಾಶ ಕಲ್ಪಿಸಿಕೊಟ್ಟಿದ್ದು, ನನಗೆ ವೈಯಕ್ತಿಕವಾಗಿ ಬಹಳ ಸಂತೋಷವಾಗಿದೆ. ರಾಜೇಶ್ ನನಗೆ ಆತ್ಮೀಯರು. ನನ್ನ ಮೊದಲ ಸಿನಿಮಾದಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ. ಕ್ರಿಕೆಟ್ ಅನ್ನೋದು ನಿಮಿತ್ತ ಅಷ್ಟೇ. ನಮ್ಮ ಕನ್ನಡ ಚಿತ್ರರಂಗದ ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಬಾಂಧವ್ಯ ಇದೆ ಅನ್ನೋದನ್ನು ತೋರಿಸಿಕೊಡುತ್ತದೆ. ಈ ಪಂದ್ಯಾವಳಿ ಯಶಸ್ವಿಯಾಗಲಿ ಎಂದರು.

ಡಾ. ರಾಜ್ ಕಪ್ ಸೀಸನ್ 6 ನಲ್ಲಿ ಒಟ್ಟು 12 ತಂಡಗಳು ಭಾಗಿಯಾಗಲಿದ್ದು, 27 ಮ್ಯಾಚ್ ಗಳು ನಡೆಯಲಿದೆ. ಡಾಲಿ ಧನಂಜಯ್, ಅನಿರುದ್ದ್, ಡಾರ್ಲಿಂಗ್ ಕೃಷ್ಣ , ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ಪ್ರಜ್ವಲ್, ಕೋಮಲ್, ಶ್ರೀನಗರ ಕಿಟ್ಟಿ, ರಾಜುಗೌಡ ನೇತೃತ್ವದ ತಂಡಗಳು ಪಾಲ್ಗೊಳ್ಳಲಿವೆ. ಇನ್ನು, ರಾಜ್ ಕಪ್ ಸೀಸನ್ 6ರ ಲೀಗ್ ಮ್ಯಾಚ್ ಗಳು ವಿದೇಶದಲ್ಲಿ ನಡೆಯಲಿದೆ. ಈ ಬಾರಿ ಲೀಗ್ ಪಂದ್ಯಗಳು ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ ಬ್ಯಾಂಕಾಕ್ ಮತ್ತು ದುಬೈನಲ್ಲಿ ನಡೆಯಲಿವೆ. ಈ ಮಹತ್ವದ ರಾಜ್ ಕಫ್ ಟೂರ್ನಿಗಾಗಿ ಸ್ಯಾಂಡಲ್ ವುಡ್ ತಾರೆಯರು, ತಂತ್ರಜ್ಞರ, ರಾಜಕೀಯ, ಮಾಧ್ಯಮದವರು ಭಾಗಿಯಾಗಲಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ