Featured
Drone Pratap Arrest : ಮೈಸೂರಿನಲ್ಲಿ ಪ್ರತಾಪ್ ಅರೆಸ್ಟ್.! – ಬೆಂಗಳೂರಿಗೆ ಕರೆತಂದ ಪೊಲೀಸರು!
ರೈಸಿಂಗ್ ಕನ್ನಡ :
ಬೆಂಗಳೂರು :
ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್ ಈಗ ಬೆಂಗಳೂರು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಮೈಸೂರಿನಲ್ಲಿ ಸಿಕ್ಕಿಬಿದ್ದ ಡ್ರೋನ್ ಪ್ರತಾಪ್ನನ್ನು ವಶಕ್ಕೆ ಪಡೆದ ಪೊಲೀಸರು ಈಗ ಬೆಂಗಳೂರು ಕರೆ ತಂದಿದ್ದಾರೆ.
ಡ್ರೋನ್ ಪ್ರತಾಪ್ ಜುಲೈ 15ರಂದು ಹೈದರಾಬಾದ್ನಿಂದ ಬೆಂಗಳೂರಿಗೆ ಬಂದಿದ್ದ. ತಲಘಟ್ಟಪುರದಲ್ಲಿ ಈತನನ್ನ ಕ್ವಾರಂಟೈನ್ ಮಾಡಲಾಗಿತ್ತು. ಅದಾಗಿ ಎರಡೇ ದಿನಕ್ಕೆ ಖಾಸಗಿ ವಾಹಿನಿಯೊಂದರಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದು. ಇದು ಕ್ವಾರಂಟೈನ್ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈತನ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದೂರು ದಾಖಲಿಸಿದ್ದರು. ಅದಾದ ಬಳಿಕ ಡ್ರೋನ್ ಪ್ರತಾಪ್ ನಾಪತ್ತೆಯಾಗಿದ್ದ.
ಪೊಲೀಸರು ಈತನ ಮೊಬೈಲ್ ಜಾಡು ಹಿಡಿದು, ಬಳಿಕ ಮೈಸೂರಿನಲ್ಲಿ ಇರುವುದು ಖಚಿತಪಟ್ಟಿದೆ. ಡ್ರೋನ್ ಪ್ರತಾಪ್ ಬೆನ್ನತ್ತಿದ ತಲಘಟ್ಟಪುರ ಪೊಲೀಸರು ಆತನನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ. ಪ್ರತಾಪ್ ಬಂಧನಕ್ಕೆ ಮೂರು ತಂಡಗಳನ್ನು ರಚಿಸಲಾಗಿತ್ತು. ಮೈಸೂರಿನ ಸಂಬಂಧಿಕರೊಬ್ಬರ ಮನೆಯಲ್ಲಿ ತಂಗಿದ್ದ ಪ್ರತಾಪ್ ಈಗ ಬಂಧನಕ್ಕೀಡಾಗಿದ್ದಾನೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?