Featured
ಡ್ರೋನ್ ಪ್ರತಾಪ್ ಬಂಧನಕ್ಕೆ ಮೂರು ತಂಡ – ಮೈಸೂರಿಗೆ ಹೊರಟ ಪೊಲೀಸರು..!
ರೈಸಿಂಗ್ ಕನ್ನಡ :
ಬೆಂಗಳೂರು :
ಈಗ ಎಲ್ಲೆಲ್ಲೂ ಡ್ರೋನ್ ಪ್ರತಾಪ್‌ದೆ ಸುದ್ದಿ. ಡ್ರೋನ್ ವಿಚಾರದಲ್ಲಿ ಡೋಂಗಿ ಬಿಟ್ಟಿ ಪ್ರತಾಪ ಮೆರೆದ ಈ ನಖಲಿ ವಿಜ್ಞಾನಿ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾನೆ. ಈತನ ಬಂಧನಕ್ಕಾಗಿ ಮೂರು ತಂಡಗಳನ್ನ ಕೂಡ ರಚಿಸಲಾಗಿದೆ. ಬೆಂಗಳೂರಿನಲ್ಲಿ ಕ್ವಾರಂಟೈನ್ನಲ್ಲಿರಬೇಕಿದ್ದ ಡ್ರೋನ್ ಪ್ರತಾಪ್ ಇದೀಗ ಮೈಸೂರಿನಲ್ಲಿ ಪತ್ತೆಯಾಗಿದ್ದಾರೆ. ಕ್ವಾರಂಟೈನ್ ನಿಯಮಗಳನ್ನ ಉಲ್ಲಂಘಿಸಿದ ಕಾರಣಕ್ಕೆ ಪ್ರತಾಪ್ ಬಂಧನಕ್ಕೆ ಮೂರು ತಂಡಗಳನ್ನ ರಚಿಸಲಾಗಿತ್ತು. ಅದರ ಬೆನ್ನಲ್ಲೇ ಆತ ಮೈಸೂರಿನಲ್ಲಿರುವುದು ದೃಢಪಟ್ಟಿದೆ.
ಈತನನ್ನು ಕರೆ ತರಲು ಬಿಬಿಎಂಪಿ ಸಿಬ್ಬಂದಿ ಮತ್ತು ಪೊಲೀಸರು ಮೈಸೂರಿಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ ಈತನನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇಡಲು ಬಿಬಿಎಂಪಿ ನಿರ್ಧರಿಸಿದೆ. ಆದರೆ, ಡ್ರೋನ್ ಪ್ರತಾಪ್ ತಾನು ಮೈಸೂರಿನಲ್ಲೇ ಕ್ವಾರಂಟೈನ್ನಲ್ಲಿ ಇರುತ್ತೇನೆಂದು ಹೇಳುತ್ತಿದ್ದಾನೆ ಎನ್ನಲಾಗಿದೆ.
ಡ್ರೋನ್ ಪ್ರತಾಪ್ ಜುಲೈ 15ರಂದು ಹೈದರಾಬಾದ್ನಿಂದ ಬೆಂಗಳೂರಿಗೆ ಬಂದಿದ್ದ. ತಲಘಟ್ಟಪುರದ ಅಪಾರ್ಟ್ಮೆಂಟ್ವೊಂದರಲ್ಲಿ ಈತ ಕ್ವಾರಂಟೈನ್ ಆಗಿದ್ದ. ಆತನ ಕೈಗೆ ಬಿಬಿಎಂಪಿಯಿಂದ ಕ್ವಾರಂಟೈನ್ ಸ್ಟಿಕರ್ ಕೂಡ ಅಂಟಿಸಲಾಗಿತ್ತು. ಆದರೆ, ಅದಾಗಿ ಎರಡೇ ದಿನಕ್ಕೆ ಈತ ಖಾಸಗಿ ವಾಹಿನಿಯೊಂದರಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದು. ಇದು ಕ್ವಾರಂಟೈನ್ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈತನ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದೂರು ದಾಖಲಿಸಿದ್ದರು. ಅದಾದ ಬಳಿಕ ಡ್ರೋನ್ ಪ್ರತಾಪ್ ನಾಪತ್ತೆಯಾಗಿದ್ದ. ಪೊಲೀಸರು ಈತ ಮೊಬೈಲ್ ಜಾಡು ಹಿಡಿಯುತ್ತಾರೆ. ಆದರೆ, ಜ್ಞಾನಭಾರತಿ ಬಳಿ ಈತನ ಮೊಬೈಲ್ ಸ್ವಿಚ್ ಆಫ್ ಆಗಿರುವುದು ತಿಳಿದುಬರುತ್ತದೆ. ಇದೀಗ ಮೈಸೂರಿನಲ್ಲಿ ಈತ ಇರುವುದು ಖಚಿತಪಟ್ಟಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?