Connect with us

ಆರೋಗ್ಯ

ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಿ; ಬಾಡಿ ಕೂಲ್ ಅಷ್ಟೇ ಅಲ್ಲ, ಈ ಎಲ್ಲಾ ಸಮಸ್ಯೆಯೂ ದೂರವಾಗುತ್ತೆ

Health tips : ಬೇಸಿಗೆಯಲ್ಲಿ ಅತಿಯಾದ ಬೆವರು ಮತ್ತು ಸುಸ್ತು ಸಹಜವಾಗಿ ಇರುತ್ತದೆ. ಇದಕ್ಕೆ ಕಾರಣ ನಮ್ಮ ದೇಹದಿಂದ ಪೌಷ್ಟಿಕಾಂಶಗಳ ನಷ್ಟ ಉಂಟಾಗುವುದು. ಆದರೆ ಇದನ್ನು ಸಮತೋಲನ ಗೊಳಿಸಿಕೊಳ್ಳಲು ಕೆಲ ಆಹಾರಗಳನ್ನು ಸೇವಿಸಬೇಕು. ಅದರಲ್ಲೂ ಸೌತೆಕಾಯಿಯನ್ನು ಬೇಸಿಗೆಯಲ್ಲಿ ಸೇವಿಸುವುದು ತುಂಬಾ ಒಳ್ಳೆಯದು.

ನಮ್ಮ ಆರೋಗ್ಯ ಯಾವಾಗಲೂ ಒಂದೇ ರೀತಿ ಇರುತ್ತದೆ ಎಂದು ಹೇಳಲು ಆಗುವುದಿಲ್ಲ. ಕಾಲ ಕಾಲಕ್ಕೆ ಹೇಗೆ ಹೊರಗಿನ ವಾತಾವರಣ ಬದಲಾವಣೆ ಆಗುತ್ತದೆಯೋ, ಅದೇ ರೀತಿ ನಮ್ಮ ಆರೋಗ್ಯ ಕೂಡ ಬದಲಾಗುತ್ತಿರುತ್ತದೆ. ಪ್ರಸ್ತುತ ಬೇಸಿಗೆ ಕಾಲ ಆಗಿದ್ದು, ಬಿಸಿಲಿನ ತಾಪಮಾನ ವಿಪರೀತ ಹೆಚ್ಚಿದೆ ಎಂದು ನಿಮಗೂ ತಿಳಿದಿದೆ.

ಈ ಸಮಯದಲ್ಲಿ ಅತಿಯಾದ ಬೆವರು ಮತ್ತು ಸುಸ್ತು ಸಹಜವಾಗಿ ಇರುತ್ತದೆ. ಇದಕ್ಕೆ ಕಾರಣ ನಮ್ಮ ದೇಹದಿಂದ ಪೌಷ್ಟಿಕಾಂಶಗಳ ನಷ್ಟ ಉಂಟಾಗುವುದು. ಆದರೆ ಇದನ್ನು ಸಮತೋಲನಗೊಳಿಸಿಕೊಳ್ಳಲು ಕೆಲ ಆಹಾರಗಳನ್ನು ಸೇವಿಸಬೇಕು. ಅದರಲ್ಲೂ ಸೌತೆಕಾಯಿಯನ್ನು ಬೇಸಿಗೆಯಲ್ಲಿ ಸೇವಿಸುವುದು ತುಂಬಾ ಒಳ್ಳೆಯದು.

ಹೌದು ವಾಸ್ತವವಾಗಿ ಸೌತೆಕಾಯಿಯನ್ನು ಸೂಪರ್ಫುಡ್ ಎಂದು ಪರಿಗಣಿಸಲಾಗುತ್ತದೆ. ಇದನ್ನು ಸೇವಿಸುವುದರಿಂದ ಬೇಸಿಗೆಯಲ್ಲಿ ಸಾಕಷ್ಟು ಪರಿಹಾರ ಸಿಗುತ್ತದೆ. ಇದನ್ನು ಸಲಾಡ್ ಆಗಿ ಕೂಡ ತಿನ್ನಬಹುದಾದರೂ, ಅನೇಕ ಮಂದಿ ಇದನ್ನು ರೈತಾಗೆ ಸೇರಿಸಲು ಇಷ್ಟಪಡುತ್ತಾರೆ. ಸೌತೆಕಾಯಿಯಲ್ಲಿ ಪ್ರೋಟೀನ್, ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ, ಕಾರ್ಬೋಹೈಡ್ರೇಟ್ಗಳು, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮ್ಯಾಂಗನೀಸ್ ಮುಂತಾದ ಅನೇಕ ಪೋಷಕಾಂಶಗಳಿವೆ. ಸೌತೆಕಾಯಿಯಲ್ಲಿ 96% ನೀರಿನಾಂಶ ಇದೆ. ಇದು ದೇಹದಲ್ಲಿನ ನಿರ್ಜಲೀಕರಣವನ್ನು ತಡೆಯುತ್ತದೆ.

ಹೆಲ್ತ್ಲೈನ್ ವರದಿ ಪ್ರಕಾರ, ಸೌತೆಕಾಯಿ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಈ ಉತ್ಕರ್ಷಣ ನಿರೋಧಕಗಳು ನಮ್ಮ ದೇಹವನ್ನು ಫ್ರೀ ರಾಡಿಕಲ್ಗಳಿಂದ ರಕ್ಷಿಸುತ್ತವೆ. ಈ ರಾಡಿಕಲ್ಗಳು ಕ್ಯಾನ್ಸರ್, ಹೃದಯ, ಶ್ವಾಸಕೋಶ ಮತ್ತು ಸ್ವಯಂ ನಿರೋಧಕ ಕಾಯಿಲೆಗಳು ಸೇರಿದಂತೆ ಅನೇಕ ದೀರ್ಘಕಾಲದ ಕಾಯಿಲೆಗಳಿಗೆ ಕಾರಣವಾಗುತ್ತವೆ. ಸೌತೆಕಾಯಿಯನ್ನು ಸೇವಿಸುವುದರಿಂದ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು. ಸೌತೆಕಾಯಿ ದೇಹವನ್ನು ಆರೋಗ್ಯವಾಗಿರಿಸುತ್ತದೆ.

ಸೌತೆಕಾಯಿ ದೇಹ ಆರೋಗ್ಯಕರವಾಗಿರಲು ಮತ್ತು ಚಯಾಪಚಯವನ್ನು ಕಾಪಾಡಿಕೊಳ್ಳಲು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಸೌತೆಕಾಯಿಗಳು ನೀರಿನಲ್ಲಿ ಸಮೃದ್ಧವಾಗಿವೆ ಮತ್ತು ಇದು ಚಯಾಪಚಯವನ್ನು ಹೆಚ್ಚಿಸುತ್ತದೆ. ಸೌತೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ, ಜನರು ತಮ್ಮ ದೈನಂದಿನ ನೀರಿನ ಅವಶ್ಯಕತೆಯ 40% ಅನ್ನು ಪಡೆಯಬಹುದು. ಇದು ನಿಮ್ಮ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ ಮತ್ತು ನಿಮಗೆ ಫ್ರೆಶ್ನೆಸ್ ನೀಡುತ್ತದೆ.

ಮಧುಮೇಹವನ್ನು ನಿಯಂತ್ರಿಸುವಲ್ಲಿ ಸೌತೆಕಾಯಿ ತುಂಬಾ ಪರಿಣಾಮಕಾರಿಯಾಗಿದೆ. ಇದು ಅನೇಕ ಅಧ್ಯಯನಗಳಲ್ಲಿ ಸಾಬೀತಾಗಿದೆ. ಸೌತೆಕಾಯಿಯ ನಿಯಮಿತ ಸೇವನೆಯು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಜೊತೆಗೆ ಅತಿಯಾದ ಸಕ್ಕರೆ ಸೇವನೆಯಿಂದ ಉಂಟಾಗುವ ಸಮಸ್ಯೆಗಳನ್ನು ಸಹ ತಪ್ಪಿಸಬಹುದು. ಸೌತೆಕಾಯಿಯು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಸಹ ಪರಿಣಾಮಕಾರಿಯಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ