Featured
ಪುಲ್ವಾಮದಲ್ಲಿ ಗುಂಡಿನ ಚಕಮಕಿ: ಯೋಧ ಹುತಾತ್ಮ: ಎನ್ಕೌಂಟರ್ಗೆ ಉಗ್ರ ಬಲಿ
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಓರ್ವ ಉಗ್ರನನ್ನ ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ನಿಖರ ಮಾಹಿತಿ ಮೇರೆಗೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭದಲ್ಲಿ ಉಗ್ರರು ಸೇನೆ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಭಾರತೀಯ ಯೋಧರು ಪ್ರತಿ ದಾಳಿ ನಡೆಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡರು ತಕ್ಷಣ ಅವರನ್ನ ಆಸ್ಪತ್ರಗೆ ಸೇರಿಸಲಾಯಿತಾದರೂ ಯೋಧ ಕೊನೆಯುಸಿರೆಳೆದರು.
ಇನ್ನು ದಾಳಿ ವೇಳೆ ಉಗ್ರನನ್ನ ಭಾರತೀಯ ಯೋಧರು ಹೊಡೆದುರಿಳಿಸಿದರು. ಮೃತ ಉಗ್ರ ಎಲ್ಲಿಯವನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಎ.ಕೆ.47 ಮತ್ತು ಗ್ರೇನೆಡ್ಗಳನ್ನ ವಶಪಡಿಸಿಕೊಳ್ಳಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?