Featured
ನೆರೆ ಪರಿಹಾರಕ್ಕೆ ಹೋಗದ ಯಡಿಯೂರಪ್ಪ, ಅನರ್ಹ ಶಾಸಕರ ಬಚಾವ್ಗೆ ದಿಲ್ಲಿಗೆ : BSY ರಾಜಕೀಯ ನಾಟಕಕ್ಕೆ HDK ವಾಗ್ದಾಳಿ
![](https://risingkannada.com/wp-content/uploads/2019/09/bsy-kumar.jpg)
ಬೆಂಗಳೂರು/ನವದೆಹಲಿ : ಉಪ ಚುನಾವಣಾ ಕಣ ರಂಗೇರ್ತಿದ್ದಂತೆ, ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪಗಳು ಕೂಡ ದಿನೇ ದಿನೇ ಜೋರಾಗ್ತಿದೆ. ಅನರ್ಹ ಶಾಸಕರ ಪರಿಸ್ಥಿತಿ ಸದ್ಯ ಡೋಲಾಯಮಾನವಾಗಿದೆ. ನಾಳೆ ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ಪ್ರಕರಣದ ವಿಚಾರಣೆಗೆ ಬರಲಿದ್ದು, ಸಿಎಂ ಯಡಿಯೂರಪ್ಪ ದಿಢೀರ್ ದೆಹಲಿಗೆ ಹೋಗಿದ್ದಾರೆ. ಇದೇ ವಿಚಾರವಾಗಿ ಕಿಡಿಕಾರಿರೋ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನೆರೆ ಪರಿಹಾರಕ್ಕಾಗಿ ದೆಹಲಿಗೆ ಹೋಗಲಿಲ್ಲ. ಈಗ ಅನರ್ಹ ಶಾಸಕರನ್ನ ಬಚಾವ್ ಮಾಡಲು ದಿಲ್ಲಿಗೆ ಹೋಗಿದ್ದೀರಾ..? ನಿಮಗೆ ನಾಚಿಕೆ ಆಗಲ್ವಾ..? ಇದು ರಾಜಕೀಯ ನಾಟಕವಲ್ಲದೇ ಮತ್ತೇನು ಎಂದು ಹೆಚ್ಡಿಕೆ ಪ್ರಶ್ನೆ ಮಾಡಿದ್ದಾರೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾಡಿರುವ ಟ್ವೀಟ್ ಹೀಗಿದೆ ನೋಡಿ.
ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತರಳಿದ್ದೇನೆ ಎಂದಿರುವುದು ಒಂದು ‘ರಾಜಕೀಯ ನಾಟಕ’. ಅಮಿತ್ ಶಾ ರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೇ BSY ದೆಹಲಿಗೆ ಹೋಗಿದ್ದಾರೆ.
ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತರಳಿದ್ದೇನೆ ಎಂದಿರುವುದು ಒಂದು 'ರಾಜಕೀಯ ನಾಟಕ'. ಅಮಿತ್ ಶಾ ರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೇ BSY ದೆಹಲಿಗೆ ಹೋಗಿದ್ದಾರೆ.— H D Kumaraswamy (@hd_kumaraswamy) September 22, 2019
ಒಟ್ಟಿನಲ್ಲಿ ಎಲೆಕ್ಷನ್ ಅಬ್ಬರದ ಜೊತೆ ಇನ್ಮುಂದೆ ರಾಜಕೀಯ ನಾಯಕರ ಮಾತಿನ ಸಮರವೂ ಶುರುವಾಗಲಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರ ಮಾತಿನ ಬಾಣಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ಜೋರಾಗಿ ಇರೋದ್ರಲ್ಲಿ ಸಂಶಯವೇ ಇರಲ್ಲ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?