Connect with us

Featured

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ – ದಪ್ಪ ಚರ್ಮದ ಸರ್ಕಾರ ಎಂದು ವ್ಯಂಗ್ಯ..!

ರೈಸಿಂಗ್ ಕನ್ನಡ :

ಬೆಂಗಳೂರು :

ದಪ್ಪ ಚರ್ಮದ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪಕ್ಷದ ವತಿಯಿಂದ
ತೀವ್ರ ಸ್ವರೂಪದ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.

Advertisement

ಪೆಟ್ರೋಲ್, ಡೀಸೆಲ್ ಅತ್ಯಂತ ದುಬಾರಿಯಾಗಿದೆ. ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ಜನಪರ ಹೋರಾಟ ಕೈಗೆತ್ತಿಕೊಳ್ಳಬೇಕು. ಕಳೆದ ಆರು ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರ್ಕಾರ ಸುಮಾರು 18 ಲಕ್ಷ ಕೋಟಿ ಸಂಗ್ರಹ ಮಾಡಿರುವ ಮಾಹಿತಿ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವುದರಿಂದ ಪೆಟ್ರೋಲ್, ಡೀಸೆಲ್ 25 ರೂ. ಆಸುಪಾಸಿನಲ್ಲಿ ಮಾರಾಟವಾಗಬೇಕಿತ್ತು. ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ಸಂಪೂರ್ಣ ವಿಫಲವಾಗಿವೆ ಎಂದು ಕಿಡಿಕಾರಿದ್ದಾರೆ. ಪರಿಸ್ಥಿತಿ ನಿರ್ವಹಣೆಗೆ ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡದೆ ಜನರಿಗೆ ಎರಡೂ ಸರ್ಕಾರಗಳು ದ್ರೋಹ ಮಾಡಿವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಆರೋಪಿಸಿದ್ದಾರೆ.

ದೇಶದ ಹಣಕಾಸು ಪರಿಸ್ಥಿತಿ‌ ಮೊದಲೇ ಚೆನ್ನಾಗಿರಲಿಲ್ಲ. ಇದೀಗ ಸರ್ಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಬಡಿದಿದೆ ಎಂದು ಟೀಕಿಸಿದ್ದಾರೆ. ಲಾಕ್‌ಡೌನ್ ತೆಗೆದ ಬಳಿಕ ಕೊರೊನಾ ಸೋಂಕು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಆದರೆ, ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ ಅಂತ ಬೇಸರ ವ್ಯಕ್ತಪಡಿಸಿದ್ರು. ರೈತರು ಮತ್ತಿತರ ಸಮುದಾಯಗಳಿಗೆ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಈ ವರೆಗೆ ತಲುಪಿಲ್ಲ. ಲಾಕ್‌ಡೌನ್ ಸಮಯದಲ್ಲೇ ಜನರ ಕೈಗೆ ಹಣ ಕೊಟ್ಟಿದ್ದರೆ ಅವರಿಗೆ ಈಗ ಕಷ್ಟ ಬರುತ್ತಿರಲಿಲ್ಲ ಎಂದು ಸರ್ಕಾರಕ್ಕೆ ತಿಳಿಹೇಳಿದ್ರು.

ಕೊರೊನಾ ವಿಚಾರದಲ್ಲಿ ದೇಶದ ಸ್ಥಿತಿ ಕೆಟ್ಟದಾಗಿದೆ. ಮುಂದೆ ನಾವು ಅಮೆರಿಕ ಮೀರಿಸುವ ಪರಿಸ್ಥಿತಿ ಇದೆ. ಜಿಡಿಪಿಯಲ್ಲಿ ಶೇ.1ರಷ್ಟನ್ನೂ‌ ಸರ್ಕಾರ ಸೋಂಕು ನಿಯಂತ್ರಣಕ್ಕೆ ಖರ್ಚು ಮಾಡಿಲ್ಲ. ಎಪಿಎಂಸಿ ರಾಜ್ಯದ ಪಟ್ಟಿಯಲ್ಲಿ ಬರುವ ವಿಷಯ. ಆದರೂ ಕೇಂದ್ರ ಸರ್ಕಾರ ಮೂಗು ತೂರಿಸುತ್ತಿದೆ. ರಾಜ್ಯ ಸರ್ಕಾರ ಕೇಂದ್ರದ ಗುಲಾಮನಂತೆ ವರ್ತಿಸುತ್ತಿದೆ. ತಿದ್ದುಪಡಿ ಆರಂಭದಲ್ಲಿ ಚೆನ್ನಾಗಿ ಕಂಡರೂ ಮುಂದಿನ ದಿನಗಳಲ್ಲಿ ರೈತರು ಬೀದಿ ಪಾಲಾಗುತ್ತಾರೆ. ಭೂ ಸುಧಾರಣೆ ಕಾಯಿದೆಗೂ ತಿದ್ದುಪಡಿ ತರಲಾಗುತ್ತಿದೆ.‌ ಉಳುವವನಿಗೇ ಭೂಮಿ ಕೊಡಬೇಕು. ಬಡವರಿಗೆ ಭೂಮಿ ಹಂಚಬೇಕು ಎಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ ಎಂದರು..

ಇದನ್ನೇ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದರು. ಉದ್ದೇಶಿತ ತಿದ್ದುಪಡಿ ಪ್ರಕಾರ ಯಾರು ಬೇಕಾದರೂ ಕೃಷಿ ಭೂಮಿ‌ ಖರೀದಿಸಬಹುದು. ನಾವು ಉಳ್ಳವರಿಗೆ ಭೂಮಿ ಕೊಟ್ಟರೆ, ಸರ್ಕಾರ ಉಳ್ಳವರಿಗೆ ಕೃಷಿ ಭೂಮಿ ಧಾರೆ ಎರೆಯಲು ಮುಂದಾಗಿದೆ. ಇದರ ವಿರುದ್ಧವೂ ತೀವ್ರ ಸ್ವರೂಪದ ಹೋರಾಟ ಅನಿವಾರ್ಯ ಎಂದು ಹೇಳಿದರು. ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಜೈಲ್ ಭರೋ ಸೇರಿದಂತೆ ನಾನಾ ರೀತಿಯ ಹೋರಾಟಗಳನ್ನು ರೂಪಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

Advertisement
ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ