Featured
ಜನತಾ ರಕ್ಷಣೆ ಆಗದಿದ್ರೆ, ಅಧಿಕಾರದಲ್ಲಿ ಯಾಕಿದ್ದೀರಾ ? ಸಚಿವ ಶ್ರೀರಾಮುಲುಗೆ, ಸಿದ್ದರಾಮಯ್ಯ ಸವಾಲ್..!

ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ಸೋಂಕಿನಿಂದ ಜನರನ್ನು ಪಾರು ಮಾಡಲು ಸಾಧ್ಯವಿಲ್ಲ ಎಂದಾದ ಮೇಲೆ ಅಧಿಕಾರದಲ್ಲಿ ಯಾಕಿದ್ದೀರಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಚಿವ ಶ್ರೀರಾಮುಲು ಅವರನ್ನು ಪ್ರಶ್ನಿಸಿದ್ದಾರೆ.
ಕೊರೊನಾ ಸೋಂಕು ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳದೆ ಈಗ ದೇವರೇ ದಿಕ್ಕು ಎಂದು ಹೇಳುವ ಮೂಲಕ ಶ್ರೀರಾಮುಲು ಅವರು ಸಚಿವ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸೋಂಕು ನಿಯಂತ್ರಣಕ್ಕೆ ಸರ್ಕಾರ ತನ್ನೆಲ್ಲ ಪ್ರಯತ್ನಗಳನ್ನು ಮಾಡಿದ ಬಳಿಕವೂ ವಿಫಲವಾದಾಗ ದೇವರ ಮೊರೆ ಹೋಗುವುದು ಸರಿ. ಆದರೆ, ಸರ್ಕಾರದಲ್ಲಿ ಹಣ, ಕೈಯ್ಯಲ್ಲಿ ಅಧಿಕಾರ ಎಲ್ಲವೂ ಇದ್ದು ಯಾವುದೇ ಪ್ರಯತ್ನ ಮಾಡದೇ ಈ ರೀತಿ ಹೇಳಿಕೆ ಕೊಡುವ ಶ್ರೀರಾಮುಲು ಅವರು ರಾಜಿನಾಮೆ ಕೊಟ್ಟು ಹೋಗುವುದೇ ಸರಿ ಎಂದರು.
ಸೋಂಕು ನಿಯಂತ್ರಣಕ್ಕೆ ಶ್ರಮಿಸುವುದು ಸಚಿವರೂ ಸೇರಿದಂತೆ ಸರ್ಕಾರದ ಪ್ರಾಥಮಿಕ ಕರ್ತವ್ಯ. ಮೊದಲು ನಮ್ಮ ಪ್ರಯತ್ನ ಮಾಡಬೇಕು. ಪರಿಹಾರ ಕಂಡು ಹಿಡಿಯಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿದರು.
You may like

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ

ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!

ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್

ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ

ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?

ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್





















