Featured
ಹುಣಸೂರು ಕ್ಷೇತ್ರದಿಂದ ಸಿಪಿ ಯೋಗೇಶ್ವರ್ ಸ್ಪರ್ಧೆ ಫಿಕ್ಸ್..? : EXCLUSIVE
![](https://risingkannada.com/wp-content/uploads/2019/11/yogeshwar.jpg)
![](https://risingkannada.com/wp-content/uploads/2019/11/yogeswar-1024x768.jpg)
ಮೈಸೂರು : ರಾಜ್ಯದಲ್ಲಿ ಉಪ ಚುನಾವಣಾ ಕಣ ರಂಗೇರಿದೆ. ಮೂರು ಪಕ್ಷಗಳಿಗೂ ಇದು ಪ್ರತಿಷ್ಠೆಯ ವಿಚಾರವಾಗಿದ್ದು ಗೆಲ್ಲಲೇ ಬೇಕು ಎಂಬ ಕಾರಣಕ್ಕೆ ಅಳೆದು ತೂಗಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗ್ತಿದೆ. ಈ ನಡುವೆ, ಅಚ್ಚರಿಯ ಬೆಳವಣಿಗೆ ಎಂಬಂತೆ ಮೈಸೂರಿನ ಹುಣಸೂರು ಕ್ಷೇತ್ರದಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಣಕ್ಕೆ ಇಳಿಯುತ್ತಾರೆ ಅನ್ನೋ ಗುಸು ಗುಸು ಜೋರಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಹುಣಸೂರು ಕ್ಷೇತ್ರದಲ್ಲಿ ಯೋಗೇಶ್ವರ್ ಸಭೆಗಳನ್ನು ನಡೆಸ್ತಿದ್ದು, ಸ್ಥಳೀಯ ಮುಖಂಡರ ಜೊತೆ ಯೋಗೇಶ್ವರ್ ಇರುವ ಫೋಟೋಗಳು ಈಗ ವೈರಲ್ ಆಗಿವೆ.
![](https://risingkannada.com/wp-content/uploads/2019/11/yogeshwar1-1024x475.jpg)
ಹುಣಸೂರಿನ ಹಳ್ಳಿ ಹಳ್ಳಿಗಳಲ್ಲಿ ಯೋಗೇಶ್ವರ್ ಸಭೆ ನಡೆಸ್ತಿದ್ದಾರೆ. ಸಂಘ ಪರಿವಾರದ ಮುಖಂಡರು, ಸ್ಥಳೀಯರ ಮುಖಂಡರ ಜೊತೆ ಕ್ಷೇತ್ರದಲ್ಲಿ ಸುತ್ತಾಟ ನಡೆಸ್ತಿದ್ದಾರೆ. ಬಹುಶಃ ಎಲ್ಲವೂ ಅಂದುಕೊಂಡಂತೆ ಆದ್ರೆ, ಬಿಜೆಪಿಯಿಂದ ಯೋಗೇಶ್ವರ್ ಹುಣಸೂರಿನಿಂದಲೇ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.
![](https://risingkannada.com/wp-content/uploads/2019/11/yogesh1-1024x768.jpg)
ಯೋಗೇಶ್ವರ್ ಸ್ಪರ್ಧೆಗೆ ಹೆಚ್.ವಿಶ್ವನಾಥ್ ಕೂಡ ಒಪ್ಪಿದ್ದಾರೆ ಎನ್ನಲಾಗಿದೆ. ವಿಶ್ವನಾಥ್ ಅವರನ್ನ ಎಂಎಲ್ಸಿ ಮಾಡುವ ಸಾಧ್ಯತೆ ಇದೆ. ಹೀಗಾಗಿ, ಯೋಗೇಶ್ವರ್ ಸ್ಪರ್ಧೆ ಖಚಿತವಾಗೋ ಎಲ್ಲಾ ಲಕ್ಷಗಣಗಳು ಕಾಣ್ತಿವೆ.
![](https://risingkannada.com/wp-content/uploads/2019/11/yogesh-1024x768.jpg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?