Featured
ರೈತ ವಿರೋಧಿ ಕಾನೂನು: ವಿನಾಶ ಕಾಲಕ್ಕೆ ವಿಪರೀತ ಬುದ್ಧಿ: ಮಾಜಿ ಸಿಎಂ ಸಿದ್ದರಾಮಯ್ಯ

ರೈಸಿಂಗ್ ಕನ್ನಡ:
ಬೆಂಗಳೂರು:
ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಸರ್ಕಾರ ರೈತರ ಒಕ್ಕಲೆಬ್ಬಿಸಿ ಕೃಷಿ ಭೂಮಿಯನ್ನು ಕಾರ್ಪೋರೇಟ್ ಧಣಿಗಳಿಗೆ ಒಪ್ಪಿಸುವ ದುರುದ್ದೇಶದಿಂದಲೇ ರೈತರ ಹಿತಾಸಕ್ತಿ ರಕ್ಷಿಸುತ್ತಿದ್ದ ಕಾನೂನುಗಳಿಗೆ ತಿದ್ದುಪಡಿ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.
ವಿಧಾನಸಭಯಲ್ಲಿ ಮಾತನಾಡಿದ ಅವರು ಸೋಂಕಿನಿಂದಾಗಿ ಜನ ಸಾವು-ನೋವಿಗೀಡಾಗಿ ದಿಕ್ಕುತೋಚದಂತಿದ್ದಾರೆ. ಇಂತಹ ಸೂತಕದ ದಿನಗಳಲ್ಲಿ ಈ ರೀತಿ ರೈತ ವಿರೋಧಿ,ಕಾರ್ಮಿಕ ವಿರೋಧಿ ಕಾನೂನುಗಳನ್ನು ಸುಗ್ರೀವಾಜ್ಞೆಗಳ ಮೂಲಕ ತರಲು ಮನುಷ್ಯತ್ವ ಇಲ್ಲದ ಸರ್ಕಾರಕ್ಕೆ ಮಾತ್ರ ಸಾಧ್ಯ. ವಿನಾಶ ಕಾಲಕ್ಕೆ ವಿಪರೀತ ಬುದ್ದಿ ಎಂದು ಕುಟುಕಿದರು.
ಕೊರೊನಾ ನಂತರದ ಬದುಕಿನ ಏಕೈಕ ಆಶಾಕಿರಣ ಕೃಷಿಕ್ಷೇತ್ರ ಎಂದು ಜ್ಞಾನೋದಯವಾಗುವ ಹೊತ್ತಿನಲ್ಲಿಯೇ ಅದನ್ನು ನಾಶ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಡವಳಿಕೆ ಕೊರೊನಾ ವೈರಸ್ ಗಿಂತಲೂ ಮಾರಣಾಂತಿಕ ಎಂದರು
ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಳಿಸುವ ತಿದ್ದುಪಡಿ, ಪ್ರಮುಖ ಬೆಳೆಗಳನ್ನು ಅಗತ್ಯವಸ್ತುಗಳ ಕಾಯ್ದೆಯಿಂದ ಹೊರಗಿಡುವ ತಿದ್ದುಪಡಿ, ಬೀಜ-ಗೊಬ್ಬರಗಳ ಮೇಲೆ ಜಿಎಸ್ ಟಿ.. ಹೀಗೆ ರೈತರ ಮೇಲೆ ಪ್ರಹಾರ ಮಾಡುತ್ತಾ ಬಂದಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗ ರೈತರಿಂದ ಭೂಮಿಯನ್ನೇ ಕಿತ್ತುಕೊಳ್ಳಲು ಹೊರಟಿವೆ ಎಂದು ಆಕ್ರೋಶ ಹೊರ ಹಾಕಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?