Featured
ಲಿಂಗಾಯಿತರಿಗೆ ಶೇ. 16 ರಷ್ಟು ಮೀಸಲಾತಿ ಕೊಡಿ: ಸಿಎಂ ಬಿಎಸ್ ವೈಗೆ ಮಾಜಿ ಸಚಿವ ಎಂಬಿ ಪಾಟೀಲ್ ಪತ್ರ
ರೈಸಿಂಗ್ ಕನ್ನಡ:
ವಿಜಯಪುರ:
ಲಿಂಗಾಯಿತರಿಗೆ ಶೇ. 16 ರಷ್ಟು ಮೀಸಲಾತಿ ಕೊಡಿ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಮಾಜಿ ಸಚಿವ ಎಂ. ಬಿ. ಪಾಟೀಲ ಪತ್ರ ಬರೆದಿದ್ದಾರೆ.
ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.16 ರಿಂದ 18 ರಷ್ಟು ಲಿಂಗಾಯತರಿದ್ದಾರೆ.ಈ ಸಮುದಾಯಕ್ಕೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.
ರಾಜ್ಯದ 6.50 ಕೋಟಿ ಜನಸಂಖ್ಯೆಯ ಪೈಕಿ ಲಿಂಗಾಯತರ ಜನಸಂಖ್ಯೆ ಒಂದು ಕೋಟಿಗಿಂತಲೂ ಹೆಚ್ಚಾಗಿದೆ .ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದಿದ್ದಾರೆ.
ನೆರೆಯ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕೂಡ ಲಿಂಗಾಯತರಿಗೆ ಶೇ.16 ರಿಂದ 18ರಷ್ಟು ಮೀಸಲಾತಿ ನೀಡಬೇಕು.ಶಿಕ್ಷಣ, ಉದ್ಯೋಗ, ಸ್ಕಾಲರ್ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ಲಿಂಗಾಯತರಿಗೆ ನ್ಯಾಯ ದೊರಕಿಸಿಕೊಡಬೇಕು.
ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, ರೂ. 100-200 ಕೋ. ಅನುದಾನ ಒದಗಿಸಿದರೆ ಹೆಚ್ಚಿನ ಪ್ರಯೋಜನವಾಗುವುದಿಲ್ಲ,ಈ ಅಭಿವೃದ್ಧಿ ನಿಗಮ ಸ್ಥಾಪನೆ ಎಂಬುದು ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?