ರಾಜ್ಯ
ಮದುವೆ ನಿರಾಕರಿಸಿದಕ್ಕೆ ಸೊಸೆಯನ್ನೇ ಹತ್ಯೆಗೈದ ಮಾವ
ಹಾವೇರಿ: ಮದುವೆಯಾಗಲು ನಿರಾಕರಿಸಿದಳೆಂಬ ಕಾರಣಕ್ಕೆ ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಮಾವ ಹತ್ಯೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿಯಲ್ಲಿ ನಡೆದಿದೆ.
ದೀಪಾ ಗೊಂದಿ (21) ಕೊಲೆಯಾದ ಯುವತಿ. ಮಾಲತೇಶ ಬಾರ್ಕಿ (35) ಕೊಲೆ ಮಾಡಿದ ಆರೋಪಿ. ಸಂಬಂಧದಲ್ಲಿ ಸೊಸೆಯಾಗಿದ್ದ ದೀಪಾಳೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮಾವ ಮಾಲತೇಶ. ಏಪ್ರಿಲ್ 22ರಂದು ದೀಪಾ ಮತ್ತು ಮಾಲತೇಶ್ ಮದುವೆ ಫಿಕ್ಸ್ ಆಗಿತ್ತು.
ಮದುವೆ ತಯಾರಿ ನಡೆಸಿದ್ದರು. ಆದರೆ ಅದೇನಾಯ್ತೋ ನಿಶ್ಚಿತಾರ್ಥದ ಬಳಿಕ ಮಾವನೊಂದಿಗೆ ಮದುವೆಯಾಗಲು ದೀಪಾ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಮಾವ ಸೊಸೆಯನ್ನು ಉಪಾಯದಿಂದ ಹೊರಗಡೆ ಕರೆದುಕೊಂಡು ಹೋಗಿ ವಿಷ ಕುಡಿಸಿದ ಬಳಿಕ ನೇಣು ಹಾಕಿ ಹತ್ಯೆ ಮಾಡಿದ್ದಾನೆ.
ಕೃತ್ಯ ನಡೆದ ಐದು ದಿನಗಳ ಬಳಿಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಹಾನಗಲ್ ಠಾಣೆ ಪೊಲೀಸರು ಹಂತಕನನ್ನು ಬಂಧಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?