Featured
ಕಾಂಗ್ರೆಸ್ನಲ್ಲಿ ಚುರುಕಾಯಿತು ಪಕ್ಷ ಸಂಘಟನೆ- ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ
ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯ ಕಾಂಗ್ರೆಸ್ ಘಟಕಕ್ಕೆ ಡಿ.ಕೆ.ಶಿವಕುಮಾರ್ ನೂತನ ಅಧ್ಯಕ್ಷರಾದ ನಂತರ ಪಕ್ಷ ಸಂಘಟನೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಯುವ ಘಟಕದ ಅಧ್ಯಕ್ಷರ ಆಯ್ಕೆ ಬಗ್ಗೆಯೂ ಚರ್ಚೆ ನಡೆಯುತ್ತಿದ್ದು ಆಕಾಂಕ್ಷಿಗಳಲ್ಲಿ ಆಸೆ ಚಿಗುರಿದೆ.
ಜಯನಗರ ಶಾಸಕಿ ಸೌಮ್ಯರೆಡ್ಡಿ, ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್, NUSI ರಾಜ್ಯ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್, ರಕ್ಷಾ ರಾಮಯ್ಯ ಮತ್ತು ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯ ಆಪ್ತ ರಾಮಕೃಷ್ಣ ರೊಳ್ಳಿ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ.
ಪಕ್ಷದ ಎಲ್ಲಾ ಹುದ್ದೆಗಳು ಬೆಂಗಳೂರು, ಮತ್ತು ಮೈಸೂರು ಭಾಗಕ್ಕೆ ಸೀಮಿತವಾಗಿರುವುದರಿಂದ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಹಿನ್ನೆಡೆಯಾಗುತ್ತದೆ. ಆದ್ದರಿಂದ ಉತ್ತರ ಕರ್ನಾಟಕದ ಪ್ರಭಾವಿ ಯುವ ಮುಖಂಡ ರಾಮಕೃಷ್ಣ ರೊಳ್ಳಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ.
ರೊಳ್ಳಿಗೆ ಅಧ್ಯಕ್ಷ ಸ್ಥಾನ ನೀಡಿದ್ರೆ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಚುರುಕು ಸಿಕ್ಕಂತೆ ಆಗುತ್ತದೆ ಎಂಬುದು ಕಾರ್ಯಕರ್ತರ ಆಶಯ. ರಾಮಕೃಷ್ಣ ರೊಳ್ಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕ ಬೈರತಿ ಸುರೇಶ್ ಸೇರಿ ಅನೇಕ ಕಾಂಗ್ರೆಸ್ ನಾಯಕರು ಬೆಂಬಲ ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?