ಆರೋಗ್ಯ
ಮೂರು ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು: ಡಾ: ಕುಮಾರ
![](https://risingkannada.com/wp-content/uploads/2024/02/scanning.jpg)
ಮೈಸೂರು : ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭ್ರೂಣ ಹತ್ಯೆ ಪ್ರಕರಣ ಕುರಿತಂತೆ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಕೆ.ಆರ್.ಪೇಟೆ ತಾಲ್ಲೂಕು-01, ನಾಗಮಂಗಲ ತಾಲ್ಲೂಕು-02 ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 55 ಸ್ಕ್ಯಾನಿಂಗ್ ಸೆಂಟರ್, 25 ಹಾಸ್ಪಿಟಲ್, 32 ಲ್ಯಾಬ್, 130 ಕ್ಲಿನಿಕ್ ಗಳನ್ನು ಪರಿಶೀಲಿಸಿರುವ ಬಗ್ಗೆ ನಿಯೋಜಿಸಿರುವ ವೈದ್ಯರು, ಅಧಿಕಾರಿಗಳು ಇಲ್ಲಿ ಯಾವುದೇ ಹೆಣ್ಣು ಭ್ರೂಣ ಲಿಂಗ ಪತ್ತೆ ಅಥವಾ ಅನಾಧಿಕೃತ ಕೃತ್ಯ ನಡೆಯುತ್ತಿಲ್ಲ ಎಂಬ ದೃಢೀಕರಣ ಪತ್ರವನ್ನು ನೀಡಬೇಕು ಎಂದರು.
ಈಗಾಗಲೇ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅರಿವು ಕಾರ್ಯಕ್ರಮ ಇನ್ನೂ ಚುರುಕುಗೊಳ್ಳಬೇಕು. ಜಾಗೃತಿ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳನ್ನು ಹೆಚ್ಚು ತೊಡಗಿಸಿಕೊಳ್ಳಿ ಎಂದರು.
ಗ್ರಾಮ ಮತ್ತು ವಾಡ್೯ ಸಭೆಗಳಲ್ಲಿ ಒಬ್ಬರೂ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಿ, ಸಭೆಯಲ್ಲಿ ಹೆಣ್ಣು ಭ್ರೂಣ ಹತ್ಯೆಯ ದುಷ್ಪರಿಣಾಮ ಕುರಿತು ಅರಿವು ಮೂಡಿಸಿ ಎಂದರು.
ಜನವರಿ ಮಾಹೆಯಿಂದ ಇಲ್ಲಿಯವರೆಗೆ 12 ವಾರಕ್ಕೂ ಮೇಲ್ಪಟ್ಟು ಗರ್ಭಪಾತವಾಗಿರುವ ಪ್ರಕರಣಗಳ ಮಾಹಿತಿ ಪಡೆದು ಅವುಗಳನ್ನು ಪರಿಶೀಲಿಸಿ ಅದು ವೃದ್ಯಕೀಯ ಹಿನ್ನಲೆಯಲ್ಲಿ ವೈದ್ಯರ ಅಭಿಪ್ರಾಯದ ಮೇಲೆ ಆಗಿರುವ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ: ಮೋಹನ್ ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಮಹಿಳಾ ಪರ ಹೋರಾಟಗಾರರಾದ ಸುನಂದ ಜಯರಾಂ, ದೇವಿ, ಸಿ.ಕುಮಾರಿ, ವಿಮೋಚನ ಸಂಸ್ಥೆಯ ಮುಖ್ಯಸ್ಥ ಜನಾರ್ಧನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
![](https://risingkannada.com/wp-content/uploads/2020/04/RISING-KANNADA-logo-150px.jpg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?